ಮಂಗಳವಾರ, ಆಗಸ್ಟ್ 1, 2023
ಸಂಡೂರು: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಆ.01(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿಗೆ ಸಂಡೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಡೂರಿನ ವಾಲ್ಮೀಕಿ ವೃತ್ತದ ಹತ್ತಿರವಿರುವ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಅಥವಾ ದೂ.08395-295180, ಮೊ.9663808539 ಗೆ ಸಂಪರ್ಕಿಸಬಹುದು ಎಂದು ಸಂಡೂರು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ