ಮಂಗಳವಾರ, ಆಗಸ್ಟ್ 8, 2023
ಬಳ್ಳಾರಿ ಮಹಾನಗರ ಪಾಲಿಕೆ: ಘನತ್ಯಾಜ್ಯ ವಸ್ತು ನಿರ್ವಹಣೆಗೆ ಸಾರ್ವಜನಿಕರು ತಮ್ಮ ಅಭಿಪ್ರಾಯ ತಿಳಿಸಿ
ಬಳ್ಳಾರಿ,ಆ.08(ಕರ್ನಾಟಕ ವಾರ್ತೆ):
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ ಮಿಷನ್‍ನ ಒಂದು ಪ್ರಮುಖ ಭಾಗವಾದ ಸ್ವಚ್ಛ್ ಸರ್ವೇಕ್ಷಣ-2023 ರಲ್ಲಿ ಸಾರ್ವಜನಿಕರ ಅನಿಸಿಕೆಗಳು ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸುವ ಅಭಿಯಾನ ಶುರುವಾಗಿದೆ. ಇದರಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯು ಭಾಗವಹಿಸುತ್ತಿದ್ದು, ಬಳ್ಳಾರಿ ನಗರದ ಘನತ್ಯಾಜ್ಯ ವಸ್ತು ನಿರ್ವಹಣೆ ಸೇವೆಯನ್ನು ಇನ್ನು ಹೆಚ್ಚಿನ ಮಟ್ಟದಲ್ಲಿ ಉತ್ತಮ ಪಡಿಸಲು, ಸಾರ್ವಜನಿಕರು ನಮೂದಿಸಿದ ಲಿಂಕ್ https://vfcity-prod.sbmurban.org/register ಹಾಗೂ ಕ್ಯೂಆರ್ ಕೋಡ್ ಸಹಾಯದಿಂದ ಕೇಳಲಾದ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯಗಳನ್ನು (Feedback) ವ್ಯಕ್ತಪಡಿಸಬೇಕು. ಇದು ಆಗಸ್ಟ್ 16 ರವರೆಗೆ ಚಾಲ್ತಿಯಲ್ಲಿರಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ