ಶನಿವಾರ, ಆಗಸ್ಟ್ 5, 2023
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಆ.05(ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರವು ಪ್ರಧಾನ ಮಾಡುವ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಳಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಹಾಗೂ ಶೌರ್ಯ ಪ್ರದರ್ಶಿಸಿದ ಮಕ್ಕಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಪ್ರಶಸ್ತಿಗಾಗಿ ಅರ್ಜಿ ನಮೂನೆಗಳನ್ನು ಅನ್‍ಲೈನ್ ಮೂಲಕ ವೆಬ್ ಸೈಟ್ http://awards.gov.inನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 31 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂ. 08392-266219 ಹಾಗೂ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ