ಮಂಗಳವಾರ, ಆಗಸ್ಟ್ 22, 2023

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಆ.22(ಕರ್ನಾಟಕ ವಾರ್ತೆ): ಕುರುಗೋಡು ತಾಲೂಕಿನ ಬೈಲೂರು ಗ್ರಾಮದ ಹತ್ತಿರದ ಮಲ್ಲೇಶ್ವರ ಕ್ಯಾಂಪ್‍ನ ನಿವಾಸಿ ಎಂ.ಸುಬ್ಬಾರೆಡ್ಡಿ ಎನ್ನುವ 64 ವರ್ಷದ ವ್ಯಕ್ತಿ 2022ನೇ ಏಪ್ರೀಲ್ 06ರಂದು ಮನೆಯಿಂದ ಕಾಣೆಯಾಗಿದ್ದು, ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಅಂದಾಜು 5.5 ಅಡಿ ಎತ್ತರ, ತೆಳ್ಳನೇಯ ಮೈಕಟ್ಟು, ದುಂಡುಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಬಿಳಿ ಬಣ್ಣದ ದೋತ್ರ ಧರಿಸಿರುತ್ತಾರೆ. ಕನ್ನ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಮೇಲ್ಕಂಡ ಚಹೆರಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಎಸ್‍ಪಿ ಅವರ ದೂ.08392-258400, 08392-258300, ತೋರಣಗಲ್ಲು ಉಪವಿಭಾಗ ಡಿಎಸ್‍ಪಿ ಅವರ ಮೊ.9480803010, ಕುರುಗೋಡು ಸಿಪಿಐ ಮೊ.9480803039, ಠಾಣೆಯ ಪಿಎಸ್‍ಐ ದೂ.08393-263433 ಹಾಗೂ ಮೊ.9480803051 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ