ಮಂಗಳವಾರ, ಆಗಸ್ಟ್ 29, 2023

ಸಿರುಗುಪ್ಪದಲ್ಲಿ ವಿವಿಧೆಡೆ ದಾಳಿ: ಮೂವರು ಬಾಲಕಾರ್ಮಿಕರ ರಕ್ಷಣೆ

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾರ್ಮಿಕ ಇಲಾಖೆಯಿಂದ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಹೋಬಳಿಯಲ್ಲಿ ವಿವಿಧೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕರ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಅವರು ತಿಳಿಸಿದ್ದಾರೆ. ಹೋಬಳಿ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಮುಖಾಂತರ ತೆಕ್ಕಲಕೋಟೆ ಪಟ್ಟಣದ ವಿವಿಧ ಬೀದಿಗಳಲ್ಲಿ ಸಿರುಗಪ್ಪ ರಸ್ತೆ, ಮತ್ತು ಬಳ್ಳಾರಿ ರಸ್ತೆಯ ಮಂತಾದ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಹಣ್ಣಿನ ಅಂಗಡಿ ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಮತ್ತು ಬಿಡಿಡಿಎಸ್ ಚೈಲ್ಡ್‍ಲೈನ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಅಧಿಕಾರಿಗಳೊಂದಿಗೆ ಆಕಸ್ಮಿಕ ದಾಳಿ ಮಾಡಿ 03 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಸಂಬಂದಿಸಿದ ಮಾಲೀಕರ ವಿರುದ್ದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು. ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕಂದಾಯ ನಿರೀಕ್ಷಕ ಸುರೇಶ್, ಸಿ.ಆರ್.ಪಿ ಮೊಹಮ್ಮದ್ ಫಯಾಜ್, ಪಟ್ಟಣ ಪಂಚಾಯತಿಯ ಆರೋಗ್ಯ ನಿರೀಕ್ಷಕಿ ಅನ್ನಪೂರ್ಣ, ಕಾರ್ಮಿಕ ನಿರೀಕ್ಷಕ ಮಂಜುನಾಥ, ಬೆಂಗಳೂರು ಬಚಪನ್ ಬಚವೋ ಅಂದೋಲನ ಸಿಬ್ಬಂದಿ ಗಣೇಶ್, ಮಹಿಳಾ ಪೋಲಿಸ್ ಕಾನ್ಸ್‍ಟೇಬಲ್ ಶಾರದಾ, ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ಉಮೇಶ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ರಜಿನಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಬೋಜರಾಜ್ ಹಾಜರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ