ಬುಧವಾರ, ಆಗಸ್ಟ್ 16, 2023
ಯುವಕ ಕಾಣೆ: ಪ್ರಕರಣ ದಾಖಲು
ಬಳ್ಳಾರಿ,ಆ.16(ಕರ್ನಾಟಕ ವಾರ್ತೆ):
ಅಂದ್ರಾಳು ಗ್ರಾಮದ 08 ವಾರ್ಡ್‍ನ ಮಾರೆಮ್ಮ ಗುಡಿ ಹತ್ತಿರದ ನಿವಾಸಿ ಎಸ್.ಹರಿಕೃಷ್ಣ ಎನ್ನುವ 24 ವರ್ಷದ ಯುವಕ ಆ.15ರಂದು ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಯುವಕ ಚಹರೆ ಗುರುತು: ಎತ್ತರ 5.7 ಅಡಿ, ಗೋಧಿ ಮೈಬಣ್ಣ, ಕೋಲು ಮುಖ, ದೃಢವಾದ ಮೈಕಟ್ಟು ಹೊಂದಿದ್ದು, ಗೋಧಿ ಬಣ್ಣದ ಕಾಲರ್ ಇರುವ ಟೀ ಶರ್ಟ್ ಮತ್ತು ಬಿಳಿ ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಎಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಹಾಗೂ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ