ಬುಧವಾರ, ಆಗಸ್ಟ್ 30, 2023
ಇಲಾಖೆಯ ಕಾರ್ಯವನ್ನು ಇಷ್ಟಪಟ್ಟು ಮಾಡಿದಾಗ ಸಾಧನೆ ತಾನಾಗಿಯೇ ಬರಲಿದೆ: ಡಾ.ಹೆಚ್.ಎಲ್.ಜನಾರ್ಧನ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಜೀವನದ ಪ್ರತಿಯೊಂದು ಹಂತದಲ್ಲಿ ನಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಕಾರ್ಯನಿರ್ವಹಿಸಿದರೆ ಯಶಸ್ವಿ ಸಾಧ್ಯವೆಂದು ಬಳ್ಳಾರಿಯ ನಿರ್ಗಮಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಎಲ್.ಜನಾರ್ಧನ್ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕೋವಿಡ್ ಸಮಯದಲ್ಲಿ ಜಿಲ್ಲೆಗೆ ಆಗಮಿಸಿ ಸುಮಾರು 03 ವರ್ಷ 10 ತಿಂಗಳ ಕಾಲ ಜನತೆಗೆ ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ಒದಗಿಸಲು ಪ್ರಮಾಣಿಕವಾಗಿ ಪ್ರಯತ್ನಿಸಿರುವೆ ಎಂದರು.
ನನಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಆರೋಗ್ಯ ಇಲಾಖೆಯ ಸಚಿವರನ್ನೊಳಗೊಂಡಂತೆ ಜಿಲ್ಲೆಯ ಜನ ಪ್ರತಿನಿಧಿಗಳಿಗೆ ಹಿರಿಯ ಅಧಿಕಾರಿಗಳಿಗೆ, ಸಲಹೆ ಸೂಚನೆಗಳ ಮೂಲಕ ಮಾರ್ಗದರ್ಶನ ಮಾಡಿದ ನಿರ್ದೇಶನಾಲಯದ ಎಲ್ಲಾ ಹಿರಿಯ ವೈದ್ಯರು ಮತ್ತು ಅಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಸಹಕಾರ ನೀಡಿದ ವಿಮ್ಸ್ ನಿರ್ದೇಶಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಪ್ರಾಂಶುಪಾಲರು, ಎಲ್ಲಾ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲಾ ವೈದ್ಯ ಬಾಂಧವರಿಗೆ, ಪ್ರೀತಿಯ ಆರೋಗ್ಯ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರಿಗೆ, ಮಾಧ್ಯಮ ಮಿತ್ರರಿಗೆ ಹೃದಯ ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.
ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಮಾತನಾಡಿ, ನೇರ ನುಡಿಯ ಅಧಿಕಾರಿಯಾಗಿ ಜಿಲ್ಲಾಡಳಿತದ ಮೂಲಕ ಆಸ್ಪತ್ರೆಗಳ ಉನ್ನತೀಕರಣಕ್ಕೆ 29 ಕೋಟಿ ಡಿಎಂಎಫ್ ಅನುದಾನ ಒದಗಿಸಿಕೊಂಡಿದ್ದು ಹೆಮ್ಮೆಪಡುವ ಸಾಧನೆಯಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಹುದ್ದೆ ಅಲಂಕರಿಸಲಿ ಎಂದು ಇದೇ ಸಂದರ್ಭದಲ್ಲಿ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್ ಬಸರೆಡ್ಡಿ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅರ್ ಅನೀಲಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ, ಆರ್‍ಎಂಓ ಡಾ.ವಿಶ್ವನಾಥ, ಆಡಳಿತ ಅಧಿಕಾರಿ ಮೆಹಬೂನ ಖಾನ ಸೇರಿದಂತೆ ವೈದ್ಯಾಧಿಕಾರಿಗಳು ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಯವರು, ಸಾರ್ವಜನಿಕರು ಉಪಸ್ಥಿತರಿದ್ದರು.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ