ಸೋಮವಾರ, ಆಗಸ್ಟ್ 28, 2023
ಅಲ್ಪಸಂಖ್ಯಾತರ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಲಾಗಿದೆ.
ಶಿಷ್ಯವೇತನ ಪಡೆಯಲು ಇಚ್ಛಿಸುವಂತದ ಕಾನೂನು ಪದವಿಧರರು ಭರ್ತಿ ಮಾಡಿದ ಅರ್ಜಿಗಳನ್ನು ಸೆ.15 ರೊಳಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಅರ್ಹತೆಗಳು: ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ, ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಬಾರದು. ಅಭ್ಯರ್ಥಿಗಳ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿರಬೇಕು. ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿದ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಯಾಗಿರಬೇಕು ಹಾಗೂ ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ ಹಾಗೂ ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-200215/224 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ