ಬುಧವಾರ, ಆಗಸ್ಟ್ 23, 2023

ಜಿಲ್ಲಾ ಮಟ್ಟದ ಜಾನಪದ ಕಲಾತಂಡಗಳ ಆಯ್ಕೆ: ಅರ್ಜಿ ಆಹ್ವಾನ

ಬಳ್ಳಾರಿ,ಆ.23(ಕರ್ನಾಟಕ ವಾರ್ತೆ): ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ 2023-24 ನೇ ಸಾಲಿಗೆ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವಿವಿಧ ರಾಷ್ಟ್ರೀಯ ಕಾರ್ಯಕ್ರಮಗಳ ಬಗ್ಗೆ ಜಾನಪದ ಕಲಾ ಪ್ರರ್ದಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅರ್ಹ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಬೇರೆ ಬೇರೆ ಇಲಾಖೆಗಳ ಕಾರ್ಯಕ್ರಮ ಪ್ರದರ್ಶನ ಮಾಡಿರುವ ಮತ್ತು ನಿಗದಿಪಡಿಸಿದ ದಾಖಲಾತಿಗಳನ್ನು ಸಲ್ಲಿಸುವ ತಂಡಗಳನ್ನು ಜಿಲ್ಲಾ ಜಾನಪದ ಕಲಾ ತಂಡದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುತ್ತ್ತದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಇಲಾಖೆ, ಸಂಗೀತ ಮತ್ತು ನಾಟಕ ಅಕಾಡೆಮಿ ಅಡಿಯಲ್ಲಿ ನೊಂದಣಿಯಾಗಿ ಈಗಾಗಲೇ ಸರ್ಕಾರಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಜಾನಪದ ಕಲಾತಂಡದ ಮೂಲಕ ಪ್ರರ್ದಶನವನ್ನು ನೀಡಿರುವ ಹಾಗೂ ಪ್ರಸ್ತುತ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಇಚ್ಛೆಯುಳ್ಳವರು ಅರ್ಜಿಗಳನ್ನು ಕಚೇರಿಯ ಅವಧಿಯಲ್ಲಿ ಐಇಸಿ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಇಲ್ಲಿ ಖುದ್ದು ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಲಗತ್ತಿಸಿ ಐಇಸಿ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಬಳ್ಳಾರಿ ಇಲ್ಲಿಗೆ ಆಗಸ್ಟ್ 31ರೊಳಗೆ ಖುದ್ದಾಗಿ ಸಲ್ಲಿಸಬೇಕು. ದಾಖಲಾತಿಗಳು ನಿಯಮಾನುಸಾರ ಇದ್ದ ತಂಡಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸಮಿತಿಯ ಉಪಸ್ಥಿತಿಯಲ್ಲಿ ಕಲಾಪ್ರರ್ದಶನ ಮೂಲಕ ಆಯ್ಕೆ ಮಾಡಲಾಗುವುದು. *ನಿಯಮಗಳು:* ಕಲಾತಂಡದ ಅಧೀಕೃತ ನೊಂದಣಿಯಾಗಿರಬೇಕು. ಇಲಾಖೆಯವರು ಸೂಚಿಸಿದ ಹಳ್ಳಿಗಳಲ್ಲಿ ಕಾರ್ಯಕ್ರಮ ನಡೆಸುವುದು. ಪ್ರತಿ ದಿನ 2 ಕಾರ್ಯಕ್ರಮಗಳನ್ನು ನಡೆಸುವುದು. ಪ್ರತಿ ತಂಡದಲ್ಲಿ 8 ಜನ ಇರಬೇಕು (ಕನಿಷ್ಟ ಇಬ್ಬರು ಮಹಿಳಾ ಕಲಾವಿದರು ಕಡ್ಡಾಯ). ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ತಂಡದ ಖಾತೆಪಾಸ್ ಬುಕ್ ನೊಂದಣಿಯಾಗಿರಬೇಕು. ಕಲಾ ತಂಡದ ಪಾನ್‍ಕಾರ್ಡ್ ಲಗತ್ತಿಸುವುದು. ಹೆಚ್ಚಿನ ಮಾಹಿತಿಗಾಗಿ ಮೊ.9845715229 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ