ಶುಕ್ರವಾರ, ಆಗಸ್ಟ್ 18, 2023

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಆ.18(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿಗೆ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಅರ್ಹ ಮಕ್ಕಳಿಂದ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಆರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅನ್‍ಲೈನ್ https://awards.gov.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‍ಮೆಂಟ್‍ನ ಸರ್ಕಾರಿ ಬಾಲಕರ ಬಾಲಮಂದಿರ (ಹಿರಿಯ) ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ ಅಥವಾ ದೂ.08392-294473 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ