ಮಂಗಳವಾರ, ಆಗಸ್ಟ್ 29, 2023

ವ್ಯಕ್ತಿ ಕಾಣೆ

ಬಳ್ಳಾರಿ,ಆ.29(ಕರ್ನಾಟಕ ವಾರ್ತೆ): ನಗರದ ಕೌಲ್‍ಬಜಾರ್ 25 ವಾರ್ಡ್‍ನ ಅಬ್ದುಲ್ ಸಲಾಂ ಸ್ಟ್ರೀಟ್ ಹತ್ತಿರ ನಿವಾಸಿ ಶೇಕ್ ಮೊಹಮದ್ ಮುಜೀಬುಲ್ಲಾ ಎನ್ನುವ 35 ವರ್ಷದ ವ್ಯಕ್ತಿಯು ಆ.19ರಂದು ಕಾಣೆಯಾಗಿರುವ ಕುರಿತು ಕೌಲ್‍ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿ ಚಹರೆ ಗುರುತು: ಎತ್ತರ 5.6 ಅಡಿ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎರೆಡೂ ಕಾಲುಗಳಿಗೆ 6 ಬೆರಳುಗಳು ಇರುತ್ತವೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಮತ್ತು ಬಿಳಿ ಶರ್ಟ್ ಧರಿಸಿರುತ್ತಾನೆ. ಹಿಂದಿ, ಕನ್ನಡ, ತೆಲುಗು ಮಾತನಾಡುತ್ತಾನೆ. ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731,244145 ಪಿ.ಐ ಮೊ.9480803047 ಹಾಗೂ ಪಿಎಸ್‍ಐ ಮೊ.9480803085, ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೆÇಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ