ಶನಿವಾರ, ಆಗಸ್ಟ್ 19, 2023

ಶೈಕ್ಷಣಿಕ ಶುಲ್ಕ ಮರುಪಾವತಿಸುವ ಯೋಜನೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಆ.19(ಕರ್ನಾಟಕ ವಾರ್ತೆ): 2022-23ನೇ ಸಾಲಿನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಸುವ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ. ಅರ್ಜಿಗಳನ್ನು ಇಲಾಖೆಯ ಮುಖಾಂತರ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಕಚೇರಿಗೆ ಸೆ.09 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಮೊ.9972552385 ಗೆ ಸಂಪರ್ಕಿಸಬಹುದಾಗಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ