ಗುರುವಾರ, ಆಗಸ್ಟ್ 31, 2023

ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಆ.31(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿಗೆ ಬಳ್ಳಾರಿ ಮತ್ತು ಕುರುಗೋಡು ತಾಲೂಕುಗಳಲ್ಲಿ ಕೆಎಂಇಆರ್‍ಸಿಯ ಸಿಇಪಿಎಂಐಜೆಡ್ ಯೋಜನೆಯಡಿ ವಿವಿಧ ತೋಟಗಾರಿಕೆ ಸೌಲಭ್ಯಗಳಿಗಾಗಿ ಅರ್ಹ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈರುಳ್ಳಿ ಶೇಖರಣೆ ಘಟಕ ಹಾಗೂ ಫಾರಂ ಗೇಟ್ ಘಟಕಗಳು ನಿರ್ಮಾಣಕ್ಕಾಗಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮಗಾ ಮೈಕ್ರೋ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಟಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ, ಬಯೋಡೈಜೆಸ್ಟರ್, ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278177 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ