ಶನಿವಾರ, ಆಗಸ್ಟ್ 5, 2023
ಕರಾಮುವಿ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಬಳ್ಳಾರಿ,ಆ.05(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ನೊಂದಾಯಿಸಿಕೊಳ್ಳಬಹುದು.
ಆಸಕ್ತರು ಆಗಸ್ಟ್ 14 ರಂದು ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪೆÇ್ರ.ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ