ಶನಿವಾರ, ಆಗಸ್ಟ್ 19, 2023
ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.19(ಕರ್ನಾಟಕ ವಾರ್ತೆ):
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿನ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ದಾಖಲೆಗಳೊಂದಿಗೆ ಭರ್ತಿ ಮಾಡಿ, ಇದೇ ಕಚೇರಿಗೆ ಸಲ್ಲಿಸಲು ಸೆ.09 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಮೊ.9972552385 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ