ಗುರುವಾರ, ಆಗಸ್ಟ್ 10, 2023
ಯುವಕ ಕಾಣೆ
ಬಳ್ಳಾರಿ,ಆ.10(ಕರ್ನಾಟಕ ವಾರ್ತೆ):
ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ಆದರ್ಶ ನಗರ ನಿವಾಸಿಯಾದ ಪಿ.ಪವನ್ ಕುಮಾರ್ ಎನ್ನುವ 19 ವರ್ಷದ ಯುವಕ ಆ.05 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೆÇಲೀಸ್ ಠಾಣೆಯ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.
ಕಾಣೆಯಾದ ಯುವಕ ಚಹರೆ ಗುರುತು: ಸುಮಾರು 5.6 ಅಡಿ, ತೆಳುವಾದ ಮೈಕಟ್ಟು, ಕೋಲುಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಫುಲ್ ಟಿ-ಶರ್ಟ್, ಕಪ್ಪು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ದೊರೆತಲ್ಲಿ ತೋರಣಗಲ್ಲು ಪೆÇಲೀಸ್ ಠಾಣೆಯ ದೂ.08395-250100, ಮೊ.9480803062 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ