ಬುಧವಾರ, ಆಗಸ್ಟ್ 2, 2023
ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ: ಅರ್ಜಿ ಆಹ್ವಾನ
ಬಳ್ಳಾರಿ,ಆ.02(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆಯಿಂದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು (ದೌರ್ಜನ್ಯ ನಿಯಂತ್ರಣ) ನಿಯಮ 1995 ರ ನಿಯಮ 17 ರ ರಿತ್ಯ ಬಳ್ಳಾರಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ 5ಕ್ಕಿಂತ ಹೆಚ್ಚಿಲ್ಲದಂತೆ ಅಧಿಕಾರೇತರ ಸದಸ್ಯರು (03 ಪರಿಶಿಷ್ಟ ಜಾತಿ ಮತ್ತು 02 ಪರಿಶಿಷ್ಟ ಪಂಗಡಕ್ಕೆ ಸೇರಿದವರು), ಸರ್ಕಾರೇತರ ಸಂಸ್ಥೆ(NGOs) ಗಳೊಂದಿಗೆ ಸಂಪರ್ಕ ಹೊಂದಿರುವ ಹಾಗೂ ಇತರೆ ಪ್ರವರ್ಗಗಳಿಂದ 3ಕ್ಕೆ ಹೆಚ್ಚಿಲ್ಲದ ಸದಸ್ಯರನ್ನೊಳಗೊಂಡಂತೆ ನಾಮ ನಿರ್ದೇಶನ ಮಾಡಲು ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸದಸ್ಯರಾಗಲು ಆಸಕ್ತಿಯುಳ್ಳ ಸಮಾಜ ಸೇವಕರು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಪಡೆದುಕೊಂಡು ಭರ್ತಿ ಮಾಡಿ ಆಗಸ್ಟ್ 17 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
*ಬೇಕಾದ ದಾಖಲೆಗಳು:* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿದ ಬಗ್ಗೆ ದಾಖಲೆ, ಆಧಾರ್‍ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಇತ್ತೀಚಿನ 2 ಭಾವಚಿತ್ರಗಳು.
ಹೆಚ್ಚಿನ ಮಾಹಿತಿಗಾಗಿ ದೂ. 08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ