ಮಂಗಳವಾರ, ಆಗಸ್ಟ್ 22, 2023

ಶಾಸಕರ ಅಧಿಕೃತ ಕಚೇರಿ ಉದ್ಘಾಟಿಸಿದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ,ಆ.22(ಕರ್ನಾಟಕ ವಾರ್ತೆ): ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ತಮ್ಮ ಅಧಿಕೃತ ಶಾಸಕರ ಕಚೇರಿಯನ್ನು ಸೋಮವಾರ ಉದ್ಘಾಟಿಸಿದರು. ಸಾರ್ವಜನಿಕರು ತಮ್ಮ ಅಹವಾಲು ಹೇಳಿಕೊಳ್ಳಲು ಕಚೇರಿಯಲ್ಲಿ ಭೇಟಿ ನೀಡಬಹುದಾಗಿದೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಜಾನಕಿ, ಮಾಜಿ ಮೇಯರ್ ರಾಜೇಶ್ವರಿ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಇತರರು ಹಾಜರಿದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ