ಬುಧವಾರ, ಆಗಸ್ಟ್ 9, 2023

ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಸಲಹೆ

ಬಳ್ಳಾರಿ,ಆ.09(ಕರ್ನಾಟಕ ವಾರ್ತೆ): 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೊಂದಣಿಯನ್ನು ಪ್ರಾರಂಭಿಸಿದ್ದು, ರೈತರು ಭತ್ತ, ಮುಸುಕಿನ ಜೋಳ, ಜೋಳ, ರಾಗಿ, ಸಜ್ಜೆ , ನವಣೆ, ತೊಗರಿ, ಸೂರ್ಯಕಾಂತಿ, ನೆಲಗಡಲೆ, ಹತ್ತಿ, ಈರುಳ್ಳಿ , ಕೆಂಪು ಮೆಣಸಿನಕಾಯಿ ಮುಂತಾದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಬಹುದಾಗಿದೆ. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಬೆಳೆ ವಿಮೆ ನೋಂದಣಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ತಮ್ಮ ವ್ಯವಹಾರದ ಬ್ಯಾಂಕ್‍ಗಳಿಗೆ ಭೇಟಿ ನೀಡಬಹುದು ಹಾಗೂ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಪ್ಯೂಚರ್ ಜನರಲ್ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಗೆ (ಮೊ.9743442928) ಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ