ಶನಿವಾರ, ಸೆಪ್ಟೆಂಬರ್ 30, 2023
ಪದವೀಧರ ಮತದಾರರ ನೋಂದಣಿ ಕಾರ್ಯ ಆರಂಭ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಗೆ ನೊಂದಾಯಿಸಿಕೊಳ್ಳಬಹುದು ಎಂದು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಸಹಾಯಕ ಮತದಾರ ನೋಂದಣಾಧಿಕಾರಿಯಾಗಿರುವ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗವು, ಕರ್ನಾಟಕ ಈಶಾನ್ಯ ಪದವೀಧರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂದು ನಿರ್ದೇಶನ ನೀಡಿದ್ದಾರೆ.
*ವೇಳಾಪಟ್ಟಿ:*
ನ.06 ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನ, ನ.23 ಕರಡು ಮತದಾರರ ಪಟ್ಟಿ ಪ್ರಕಟಣೆ, ನ.23 ರಿಂದ ಡಿ.12ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಡಿ.30 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
*ಮಾರ್ಗಸೂಚಿಗಳು:*
2023ರ ನ.01 ಕ್ಕೆ 3 ವರ್ಷಗಳ ಪೂರ್ವದಲ್ಲಿ ಅಂದರೆ 2020ರ ನ.01 ರ ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. 2020ರ ನ.01 ಕ್ಕಿಂತ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ್‍ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸ್ಥಳದ ದಾಖಲೆಗಳನ್ನು ಸ್ವಯಂಧೃಡೀಕರಿಸಿ, ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ನ.06ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೋಂದಣಾಧಿಕಾರಿಗಳು/ಸಂಬಂಧಪಟ್ಟ ವಿಧಾನಸಭಾ ಮತಕೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.
ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
------
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಪ್ರಗತಿ ಪರಿಶೀಲನಾ ಸಭೆ ಅ.05ರಂದು
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಯಡಿಯಲ್ಲಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ “ಸಿಗರೇಟು ಮತ್ತು ಇತರೆ ತಂಬಾಕು ಉತ್ವನ್ನಗಳ ಅಧಿನಿಯಮ (COTPA) -2023” ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಕುರಿತಂತೆ ಅ.05ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ನೋಡೆಲ್ ಅಧಿಕಾರಿಯೂ ಆಗಿರುವ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ.
-------
ಈಶಾನ್ಯ ಪದವೀಧರ ಮತದಾರರ ನೊಂದಣಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಿಕೊಳ್ಳಲು ಅರ್ಹ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.
ಭಾರತ ಚುನಾವಣಾ ಆಯೋಗವು, ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ಹೊಸದಾಗಿ ಅರ್ಜಿ ಸಲ್ಲಿಸಬೇಕು ನಿರ್ದೇಶನ ನೀಡಿರುತ್ತದೆ.
ನ.06ರಂದು ಅರ್ಜಿ ಸ್ವೀಕರಿಸುವ ಕೊನೆಯ ದಿನವಾಗಿದೆ. ನ.23ರಂದು ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನ, ನ.23ರಿಂದ ಡಿ.09ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ, ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.
ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ಬಳ್ಳಾರಿ ತಾಲೂಕು ತಹಶೀಲ್ದಾರರು ತಿಳಿಸಿದ್ದಾರೆ.
------
ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಘಟಕ ನಿರ್ಮಾಣ ಹಾಗೂ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ತೋಟಗಾರಿಕೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರತ್ನಪ್ರಿಯಾ ಯರೆಂಗಲ್ ತಿಳಿಸಿದ್ದಾರೆ.
ಕೆಎಂಇಆರ್‍ಸಿಯ ಸಿಇಪಿಎಂಐಜೆಡ್ ಯೋಜನೆಯಡಿ ಈರುಳ್ಳಿ ಶೇಖರಣಾ ಘಟಕಗಳು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ ತಾಲ್ಲೂಕಿನಲ್ಲಿ ಮೆಗಾ ಮೈಕ್ರೋ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ವೈವಿಧ್ಯಮಯ ಬೆಳೆಯಿಂದ ರೈತರ ಆರ್ಥಿಕ ಮಟ್ಟ ಸುಧಾರಿಸುವುದು ಮತ್ತು ಮಣ್ಣಿನ ಆರೋಗ್ಯ ಉತ್ತಮ ಪಡಿಸುವುದು ಹಾಗೂ ಸಾವಯವ ಗೊಬ್ಬರ ಬಳಕೆಯನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದೆ.
*ಯೋಜನೆಯ ಮುಖ್ಯ ಘಟಕಗಳು:*
ಬಹುವಾರ್ಷಿಕ ತೋಟಗಾರಿಕೆ ಬೆಳೆ ಬೆಳೆಯುವುದು(ಮಾವು, ಸೀಬೆ, ನೇರಳೆ, ಗೇರು, ಸಿತಾಫಲ, ಗುಲಾಬಿ, ನುಗ್ಗೆ), ಅರಣ್ಯ ಬೆಳೆಯನ್ನು ಬೆಳೆಯುವುದು (ಸಾಗುವಾನಿ, ಮಹಾಗನಿ, ಚಂದನ ), ಬಯೋಡೈಜೆಸ್ಟರ್ ಅಳವಡಿಸಿಕೊಳ್ಳುವುದು (ಅಳತೆ: 10ಘಿ4ಘಿ4 ಅಡಿ), ಕೃಷಿಹೊಂಡ ನಿರ್ಮಿಸಿಕೊಳ್ಳುವುದು (ಐಚ್ಚಿಕವಾಗಿರುತ್ತದೆ)
*ಅರ್ಹತೆ:*
ರೈತರು ಕನಿಷ್ಟ 1 ಎಕರೆಯಿಂದ 2.5 ಎಕರೆ ವರೆಗೆ ಬಹುವಾರ್ಷಿಕ ತೋಟಗಾರಿಕೆ ಬೆಳೆ ಬೆಳೆಯಲು ಆಸಕ್ತಿ ಹೊಂದಿರಬೇಕು. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಶೇ.50ರಂತೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇ.75ರಂತೆ ಸಹಾಯಧನ ನೀಡಲಾಗುವುದು.
ಆಸಕ್ತ ರೈತರು ನಿಗದಿತ ಆರ್ಜಿ ನಮೂನೆಯಲ್ಲಿ ಪಹಣಿ, ಆಧಾರ್‍ಚೀಟಿ ಹಾಗೂ ಬ್ಯಾಂಕ್ ಪಾಸ್‍ಬುಕ್‍ನೊಂದಿಗೆ ಬಳ್ಳಾರಿ, ಕುರುಗೋಡು, ಕಂಪ್ಲಿ ಹೋಬಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಪಿಎಂ-ವಿಶ್ವಕರ್ಮ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರದ ಪಿ.ಎಂ-ವಿಶ್ವಕರ್ಮ ಯೋಜನೆಯಡಿ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ವಿವಿಧ ಸೌಲಭ್ಯಗಳಿಗಾಗಿ ಒಟ್ಟು 18 ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
*ಸೌಲಭ್ಯಗಳು:*
ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಐ.ಡಿ. ಕಾರ್ಡ್, ಕೌಶಲ್ಯಾಭಿವೃದ್ಧಿ, ಉಪಕರಣಗಳಿಗೆ ಪ್ರೋತ್ಸಾಹ, ಕ್ರೇಡಿಟ್ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ, ಮಾರುಕಟ್ಟೆ ಬೆಂಬಲ ಸೌಲಭ್ಯ ನೀಡಲಾಗುವುದು.
*ಯಾರು ಅರ್ಹರು?:*
ಈ ಯೋಜನೆಯು 18 ರೀತಿಯ ವ್ಯಾಪಾರಗಳಲ್ಲಿ ತೊಡಗಿರುವ ಕರಕುಶಲಿಗರು ಮತ್ತು ಕುಶಲಕರ್ಮಿಗಳನ್ನು ಒಳಗೊಳ್ಳುತ್ತದೆ. ಅದರಲ್ಲಿ ಬಡಗಿ, ದೋಣಿ ತಯಾರಕರು, ಶಸ್ತ್ರಾಸ್ತ್ರ ತಯಾರಿಸುವವರು (ಆರ್ಮರ್), ಕಮ್ಮಾರರು, ಸುತ್ತಿಗೆ ಮತ್ತು ಟೂಲ್ ಕಿಟ್ ಮಾಡುವವರು, ಬೀಗ ತಯಾರಿಸುವವರು, ಅಕ್ಕಸಾಲಿಗರು, ಕುಂಬಾರರು, ಶಿಲ್ಪಿಗಳು, ಕಲ್ಲು ಒಡೆಯುವವರು, ಚಮ್ಮಾರರು, ಮೇಸ್ತ್ರಿ, ಬುಟ್ಟಿ/ಚಾಪೆ/ಪೆÇರಕೆ/ಸೆಣಬು ನೇಯುವವರು, ಸಾಂಪ್ರದಾಯಿಕ ಗೊಂಬೆ ಮತ್ತು ಆಟಿಕೆ ತಯಾರಕರು, ಕ್ಷೌರಿಕರು, ಹೂ ಮಾಲೆ ತಯಾರಕರು, ಮಡಿವಾಳರು, ಟೈಲರ್, ಮೀನಿನ ಬಲೆಯ ತಯಾರಕರು ಅರ್ಹರಾಗಿರುತ್ತಾರೆ.
ಈ ಮೇಲಿನ ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಗ್ರಾಮ ಪಂಚಾಯತ್/ಮಟ್ಟದಲ್ಲಿರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ನೊಂದಣಿ ಮಾಡಿಕೊಳ್ಳಬಹುದಾಗಿದೆ.
*ಅರ್ಹತೆಗಳು:*
ಕುಶಲಕರ್ಮಿಗಳು 18 ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರಬೇಕು, 18 ವರ್ಷ ಮೇಲ್ಪಟ್ಟವರಾಗಿರಬೇಕು, ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರು (ಕುಟುಂಬದಲ್ಲಿನ ಗಂಡ, ಹೆಂಡತಿ ಮತ್ತು ಮದುವೆಯಾಗದ ಮಕ್ಕಳು), ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು, ಕುಶಲಕರ್ಮಿಗಳು ಮುದ್ರಾ ಮತ್ತು ಸ್ವ-ನಿಧಿ ಸಾಲ ಪಡೆದವರು ಸಾಲವನ್ನು ಹಿಂದಿರುಗಿಸಿರುವವರನ್ನು ಹೊರತುಪಡಿಸಿ ಬೇರೆ ಯಾವುದೇ ತರಹ ಸಾಲವನ್ನು ಪಡೆದಿರಬಾರದು.
*ತರಬೇತಿ ವಿವರ:*
ಕುಶಲಕರ್ಮಿಗಳಿಗೆ ನೊಂದಣಿಯಾದ ನಂತರ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ಕಾಲ ತರಬೇತಿಯನ್ನು ನೀಡಲಾಗುವುದು. ತರಬೇತಿ ಅವಧಿಯಲ್ಲಿ ಗೌರವಧನ ಮತ್ತು ಇತರೆ ಭತ್ಯೆ ನೀಡಲಾಗುವುದು. ತರಬೇತಿಯ ನಂತರ ಪ್ರಮಾಣಪತ್ರದೊಂದಿಗೆ ರೂ.15000/- ಬೆಲೆಬಾಳುವ ಉಪಕರಣವನ್ನು ನೀಡಲಾಗುವುದು. ನಂತರ ಶೇ.5 ಬಡ್ಡಿ ದರದಲ್ಲಿ ರೂ.1,00,000/- ಸಾಲವಾಗಿ ನೀಡಲಾಗುವುದು. ತದನಂತರ 15 ದಿನಗಳವರೆಗೆ ಉನ್ನತ ಮಟ್ಟದ ತರಬೇತಿಯನ್ನು ನೀಡಿ ಈಗಾಗಲೇ ಪಡೆದ ರೂ. 1,00,000/- ಸಾಲ ಮರುಪಾವತಿಯಾದ ನಂತರ ರೂ.2,00,000/-ಗಳ ಸಾಲವನ್ನು ಶೇ.5ರ ಬಡ್ಡಿ ದರದಲ್ಲಿ ನೀಡಲಾಗುವುದು ಹಾಗೂ ತಾವು ತಯಾರಿಸಲ್ಪಡುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು.
ಕುಶಲಕರ್ಮಿಗಳು ಸಂಬಂಧಿಸಿದ ತಮ್ಮ ಗ್ರಾಮ ಪಂಚಾಯತ್/ಪಟ್ಟಣ ಪಂಚಾಯಿತಿ/ ತಾಲ್ಲೂಕು/ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಸ್ಥಾಪಿತವಾಗಿರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತ್ವರಿತವಾಗಿ ನೊಂದಣಿ ಮಾಡಿಕೊಳ್ಳಬಹುದು
ಮಾಹಿತಿಗಾಗಿ www.pmvishwakarma.gov.in ಗೆ ಭೇಟಿ ನೀಡಿ ಪಿಎಂ ವಿಶ್ವಕರ್ಮ ಯೋಜನೆಯ ಮಾರ್ಗಸೂಚಿಗಳನ್ನು ನೋಡಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಿಎಸ್‍ಸಿಯ ಜಿಲ್ಲಾ ವ್ಯವಸ್ಥಾಪಕರ ಮೊ.7217624098, 9902397780. ಜಿಲ್ಲಾ ಕೈಗಾರಿಕಾ ಕೇಂದ್ರದ ಮೊ.7795499904, 8073618080. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಮೊ.9900126430, 9449226221 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಸೋಮನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಅಂತರಾಷ್ಟ್ರೀಯ ಸುರಕ್ಷಿತ ಗರ್ಭಪಾತ ದಿನ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಗರ್ಭಿಣಿ ಅವಧಿಯಲ್ಲಿ ಮಗುವಿನ ಬೆಳವಣಿಗೆಯಲ್ಲಿ ನ್ಯೂನತೆಗಳು ಅಥವಾ ತಾಯಿಯ ಜೀವಕ್ಕೆ ಗಂಡಾಂತರ ಸನ್ನಿವೇಶಗಳು ಕಂಡುಬಂದಾಗ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗಳಲ್ಲಿಯೇ ನುರಿತ ತರಬೇತಿ ಹೊಂದಿದ ವೈದ್ಯರಿಂದ ಗರ್ಭಪಾತ ಮಾಡಿಸುವುದರಿಂದ ಯಾವುದೇ ಸೋಂಕು ಉಂಟಾಗದಂತೆ ತಾಯಿ ಆರೋಗ್ಯವನ್ನು ಕಾಪಾಡಲು ಸಹಾಯಕವಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನ ವಿಭಾಗ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಡಿಹಟ್ಟಿ ಹಾಗೂ ಐಪಾಸ ಸಂಸ್ಥೆಯ ಸಹಯೋಗದಲ್ಲಿ ಬಂಡಿಹಟ್ಟಿ ನಗರ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಸುರಕ್ಷಿತ ಗರ್ಭಪಾತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರದಲ್ಲಿ ಅಸುರಕ್ಷಿತ ಗರ್ಭಪಾತಗಳಿಂದ ಶೇ.8 ಮಹಿಳೆಯರ ಮರಣ ಸಂಭವಿಸುತ್ತದೆ, ಅದನ್ನು ತಡೆಗಟ್ಟಲು ಐಪಾಸ ಸಂಸ್ಥೆಯ ಸಹಯೋಗದಲ್ಲಿ ಕರ್ನಾಟಕ ಸರಕಾರ 2014 ರಿಂದ ಸುರಕ್ಷಿತ ಗರ್ಭಪಾತ ಕಾರ್ಯಕ್ರಮವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ವೈದ್ಯಾಧಿಕಾರಿಗಳಿಗೆ ಸುರಕ್ಷಿತ ವಿಧಾನಗಳ ಮೂಲಕ ಗರ್ಭಪಾತ ಮಾಡುವ ಬಗ್ಗೆ ಹಾಗೂ ಗರ್ಭಪಾತದ ನಂತರದ ಗರ್ಭನಿರೋಧಕಗಳ ಮಹತ್ವವನ್ನು ತಿಳಿಸಲು ನಿರಂತರ ತರಬೇತಿ ನೀಡಿ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತಿದ್ದು, ಇವರಿಗೆ ಕಾಯ್ದೆಯನುಸಾರ ಗರ್ಭಪಾತ ಸೇವೆಯನ್ನು ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, “ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಕಾಯ್ದೆ 2021ರ ಮೂಲಕ ಮಹಿಳಾ ಸಬಲೀಕರಣ” ಎಂಬುದು ಈ ವರ್ಷದ ಘೋಷವಾಕ್ಯವಾಗಿದ್ದು, ಗರ್ಭವತಿಯಾದ ಪ್ರತಿ ಮಹಿಳೆಯು ತಮ್ಮ ಆರೋಗ್ಯವನ್ನು ನಿರಂತರವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಮಹಿಳೆಯರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಹಾಗೂ ಸುರಕ್ಷಿತವಾಗಿ ಸಿಗುತ್ತಿರುವುದರಿಂದ ಅಸುರಕ್ಷಿತ ಗರ್ಭಪಾತದಿಂದ ಆಗುತ್ತಿದ್ದ ತಾಯಿಯ ಮರಣ ಪ್ರಮಾಣ ಕಡಿಮೆಯಾಗಲು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುμÁ್ಟನಗೊಳಿಸಲು 2021 ರ ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಕಾಯ್ದೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ತಾಲ್ಲೂಕ ಆರೋಗ್ಯ ಅಧಿಕಾರಿ ಡಾ.ಮೋಹನಕುಮಾರಿ, ಡಾ.ಸೈಯಿದಾ ಯಾಸ್ಮೀನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಐಪಸಾ ಸಂಸ್ಥೆಯ ದೊಡ್ಡನಗೌಡ, ಎಎಸ್‍ಒ ರಾಘವೇಂದ್ರ, ಡಿಎನ್‍ಒ ಗಿರೀಶ್ ಸೇರಿದಂತೆ ಸಿಬ್ಬಂದಿಯವರು ಹಾಗೂ ಇತರರು ಉಪಸ್ಥಿತರಿದ್ದರು.
--------
ಗಾಂಧಿ ಜಯಂತಿ ಪ್ರಬಂಧ ಸ್ಪರ್ಧೆ ಜಿಲ್ಲೆಯ 9 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಾತ್ಮ ಗಾಂಧೀಜಿ ಅವರ ಬದುಕು/ವಿಚಾರ/ಹೋರಾಟಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಗಾಂಧೀಜಿಯವರ 154ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ”ಗೆ ಬಳ್ಳಾರಿ ಜಿಲ್ಲೆಯ 9 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ರಾಜ್ಯದ ಪ್ರತಿ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲಾ/ಪಿಯುಸಿ/ಪದವಿ-ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು, ಇದರಲ್ಲಿ ಪ್ರತಿ ವಿಭಾಗಕ್ಕೆ ಪ್ರತ್ಯೇಕವಾಗಿ ಮೂರು ವಿಷಯಗಳನ್ನು ಪ್ರಬಂಧ ಸ್ಪರ್ಧೆಗೆ ನೀಡಲಾಗಿತ್ತು, ಅದರಲ್ಲಿ ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯವನ್ನು ಆಯ್ದುಕೊಂಡು ಪ್ರಬಂಧ ಬರೆಯಲು ಅವಕಾಶ ನೀಡಲಾಗಿತ್ತು.
ಮೊದಲು ತಾಲ್ಲೂಕು ಮಟ್ಟದಲ್ಲಿ ಪ್ರಬಂಧ ಸ್ಪರ್ಧೆ ನಡೆಸಿ ಅಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪ್ರಬಂಧಗಳನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಿಕೊಡಲಾಗಿತ್ತು. ಜಿಲ್ಲಾ ಮಟ್ಟದಲ್ಲಿ ಪ್ರತಿ ವಿಭಾಗದಲ್ಲಿ ಮೂರು ಅತ್ಯುತ್ತಮ ಪ್ರಬಂಧಗಳನ್ನು ಆಯ್ಕೆ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶೈಕ್ಷಣಿಕ ವಿಭಾಗಗಳ ಮೂರು ಇಲಾಖೆಯ ಉಪ ನಿರ್ದೇಶಕರು ಮತ್ತು ಗಾಂಧಿ ತತ್ವಗಳನ್ನು ಸಾರುತ್ತಿರುವ ನಗರದ ಗಾಂಧಿ ಭವನದ ಟಿ.ಜಿ ವಿಠಲ ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಮೂರು ವಿಭಾಗಗಳಲ್ಲಿ ತಲಾ ಮೂರು ಅತ್ಯುತ್ತುಮ ಪ್ರಬಂಧಗಳನ್ನು ಆಯ್ಕೆ ಮಾಡಿ ರಾಜ್ಯ ಮಟ್ಟಕ್ಕೆ ನಾಮನಿರ್ದೇಶನ ಮಾಡಲಾಗಿದೆ.
ಈ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಅ.2 ರಂದು ನಡೆಲಿರುವ ಗಾಂಧಿ ಜಯಂತಿಯಂದು ನಗರದ ಹಳೆ ಜಿಲ್ಲಾಧಿಕಾರಿಗಳ ಆವರಣದಲ್ಲಿರುವ ಗಾಂಧಿ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿರುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಯುವ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ, ಜಿಲ್ಲಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ವಿಜೇತ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಪ್ರತಿ ವಿಭಾಗದಲ್ಲಿ ಪ್ರಥಮ ಬಹುಮಾನ ಗಳಿಸಿದ ವಿಧ್ಯಾರ್ಥಿಗಳಿಗೆ ತಲಾ 3,000/- ರೂ., ಎರಡನೇ ಬಹುಮಾನ ತಲಾ 2,000/- ರೂ. ಹಾಗೂ ಮೂರನೇ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ 1,000/- ರೂ. ನಗದು ಹಾಗೂ ಪ್ರಮಾಣ ಪತ್ರ ವಿತರಿಸಲಾಗುವುದು. ಅದರಂತೆ, ರಾಜ್ಯ ಮಟ್ಟದಲ್ಲಿ ಆಯ್ಕೆಯಾಗುವ ಪ್ರಥಮ ಬಹುಮಾನಕ್ಕೆ 31,000/- ರೂ., ಎರಡನೆಯ ಬಹುಮಾನ 21,000/- ರೂ. ಹಾಗೂ ಮೂರನೆ ಬಹುಮಾನ 11,000/- ರೂ. ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ.
*ಬಹುಮಾನ ವಿಜೇತ ಮಕ್ಕಳ ವಿವರ ಈ ಕೆಳಗಿನಂತಿದೆ: *
ವಿಭಾಗ ಗಳಿಸಿದ ಸ್ಥಾನ ವಿದ್ಯಾರ್ಥಿ ಹೆಸರು
ಮೊಬೈಲ್ ಸಂಖ್ಯೆ ಶಾಲೆ/ಕಾಲೇಜು ಹೆಸರು
ಪ್ರೌಢಶಾಲೆ ವಿಭಾಗ ಪ್ರಥಮ ವೀಣಾ ಕೆ.ಪಿ.ಎಸ್ ಶಾಲೆ,
ದ್ವಿತೀಯ ಚೈತ್ರ..ಯು ಸರಕಾರಿ ಶಾಲೆ, ತೋರಣಗಲ್ಲು
ತೃತೀಯ ಪ್ರಾರ್ಥನಾ ಆದರ್ಶ ವಿದ್ಯಾಲಯ, ಬಳ್ಳಾರಿ
ಪದವಿ ಪೂರ್ವ ಕಾಲೇಜು ವಿಭಾಗ ಪ್ರಥಮ ಸುಮ.ಕೆ, (ಬಿಎಸ್ ವಾಣಿಜ್ಯ) ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು, ಬಳ್ಳಾರಿ.
ದ್ವಿತೀಯ ಕಾರ್ತಿಕ.ಪಿ,(ಪ್ರಥಮ ಪಿಯುಸಿ) ವಾಡ್ರ್ಲಾ ಸಂಯುಕ್ತ ಕಾಲೇಜು, ಬಳ್ಳಾರಿ
ತೃತೀಯ ವಿದ್ಯಾ ಶ್ರೀ.ಎಸ್.ಗೌಡರ, ಪಿಸಿಎಂಬಿ (ಮೊದಲ) ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು, ಬಳ್ಳಾರಿ.
ಪದವಿ/ಸ್ನಾತಕೋತ್ತರ ವಿಭಾಗ ಪ್ರಥಮ ಅರ್ಪಿತ.ಬಿ, ಬಿಎಸ್‍ಸಿ (ಎರಡನೇ) ಶ್ರೀಮತಿ ಅಲ್ಲ ಸುಮಂಗಳಮ್ಮ ಸ್ಮಾರಕ ಮಹಿಳಾ ವಿಶ್ವವಿದ್ಯಾಲಯ, ಬಳ್ಳಾರಿ.
ದ್ವಿತೀಯ ಎಲ್.ವಿನೋದ ನಾಯಕ, ಎಂಎ ವಾಣಿಜ್ಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ
ತೃತೀಯ ಪರಮೇಶ, ಕನ್ನಡ ಅಧ್ಯಯನ ವಿಭಾಗ (ದ್ವಿತೀಯ) ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ
------
ಶುಕ್ರವಾರ, ಸೆಪ್ಟೆಂಬರ್ 29, 2023
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ.01ರಂದು
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಧೆಗಳ ಇವರ ಸಂಯುಕ್ತಾಶ್ರಯದಲ್ಲಿ ಅ.01ರಂದು ಬೆಳಿಗ್ಗೆ 10.30ಕ್ಕೆ ನಗರದ ಪಾರ್ವತಿ ನಗರದಲ್ಲಿ ಪೆÇಲೀಸ್ ಜಿಮ್‍ಖಾನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರೆ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಹೊಸಮನೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ.ಎನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕ ವಿಜಯಕುಮಾರ್ ಕೆ.ಹೆಚ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಸನ್ಮಾನ, ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಫರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಅತಿಥಿಗಳಿಂದ ಬಹುಮಾನ ವಿತರಣೆ ಮಾಡಲಾಗುವುದು.
-----------
ಮೃತ ಸಿರಿಯ ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ತೋರಣಗಲ್ಲು ಪೆÇಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಿವ್ಯಜ್ಯೋತಿ ಫ್ಯಾಕ್ಟರಿಯಲ್ಲಿ ಸ್ಪಾಂಜ್ ಐರನ್ ಲೋಡ್ ಆದ ನಂತರ ಫ್ಯಾಕ್ಟರಿಯ ಕಾಂಪೌಂಡ್ ಒಳಗೆ ಗೇಟ್ ಬಳಿ ನಿಲ್ಲಿಸಿ, ಲಾರಿ ಕ್ಲೀನರ್ ಆಗಿದ್ದ ಸಿರಿ, ಈತನು ಲಾರಿಯ ಕ್ಯಾಬಿನ್ ಮೇಲೆ ಹತ್ತಿ ತಾಡಪಾಲು ಹೊದಿಸಲು ಹೋಗಿ ತಾಡಪಾಲನ್ನು ತೆಗೆಯುತ್ತಿದ್ದಾಗ ಏಕಾಏಕಿ ಲಾರಿಯ ಕ್ಯಾಬಿನ್ ಮೇಲಿಂದ ಕೆಳಗೆ ಬಿದ್ದಾಗ ಆತನ ತಲೆಗೆ ತೀವ್ರ ರಕ್ತಗಾಯವಾಗಿದ್ದು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಫ್ಯಾಕ್ಟರಿಯ ಕ್ಯಾಂಪರ್‍ನಲ್ಲಿ ಕರೆದುಕೊಂಡು ಹೋಗಿ ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಮೃತ ಸಿರಿಯ ವಾರಸುದಾರರ ಮಾಹಿತಿ ತಿಳಿದಿರುವುದಿಲ್ಲ. ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ ದೂ.083922-258100 ಗೆ ಸಂಪರ್ಕಿಸಬಹುದು ಎಂದು ತೋರಣಗಲ್ಲು ಪೆÇಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಜಿಲ್ಲಾ ಮಟ್ಟದ ಜಿಮ್ನಾಸ್ಟಿಕ್ ಮತ್ತು ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಭಾಗವಹಿಸಲು: ನೊಂದಣಿಗೆ ಆಹ್ವಾನ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
2023-24ನೇ ಸಾಲಿನ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದ ಜಿಮ್ನಾಸ್ಟಿಕ್ ಮತ್ತು ಬಾಕ್ಸಿಂಗ್ ಪಂದ್ಯಾವಳಿಗಳನ್ನು ಬೀದರ್‍ನಲ್ಲಿ ಸಂಘಟಿಸಲಾಗುತ್ತಿದ್ದು, ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟದ ಜಿಮ್ನಾಸ್ಟಿಕ್ ಮತ್ತು ಬಾಕ್ಸಿಂಗ್ ಕ್ರೀಡಾಪಟುಗಳ ಆಯ್ಕೆ ನಡೆಸಲಾಗುವುದು. ಆಸಕ್ತ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಎಂ.ಜಾಕೀರ್ ಮೊ.9036335986, ಜಿ.ರವಿ ಮೊ.9739852460 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
-------
ಪರಿಶಿಷ್ಟ ಜಾತಿ/ಪಂಗಡದ ಕಲಾ ತಂಡಗಳ ಕಲಾವಿದರಿಂದ ಅರ್ಜಿ ಆಹ್ವಾನ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಪ್ರಸ್ತಕ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪ್ರಾಯೋಜಿಸುವ ಸಂಘ ಸಂಸ್ಥೆಗಳು ಏರ್ಪಡಿಸುವ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಕಲಾ ತಂಡಗಳ ಕಲಾವಿದರಿಗೆ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆಯಾಗಿದ್ದು, ಪ್ರಾಯೋಜನೆ ಕಾರ್ಯಕ್ರಮ ಆಯೋಜಿಸುವ ಸಂಘ ಸಂಸ್ಥೆಗಳು 15 ದಿನಗಳ ಮುಂಚಿತವಾಗಿ “ಸಕಾಲದಲ್ಲಿ” ಪೂರ್ಣ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ತಿಳಿಸಿದ್ದಾರೆ.
-------
ಅ.01ರಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಪಂದ್ಯಾವಳಿ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
2023-24 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ವಿವಿಧ ಕ್ರೀಡೆಗಳ ಪಂದ್ಯಾವಳಿಗಳನ್ನು ಅ.01ರಿಂದ ಮೂರು ದಿನಗಳ ಕಾಲ ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
ಅ.01ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಕಿ ಮತ್ತು ಟೇಬಲ್ ಟೆನ್ನಿಸ್ (ನೇರವಾಗಿ ಜಿಲ್ಲಾ ಮಟ್ಟದ ಪಂದ್ಯಾವಳಿಗಳು) ನಡೆಯಲಿದ್ದು, ಮಾಹಿತಿಗಾಗಿ ಎಂ.ಜಾಕೀರ್ ಮೊ.9036335986(ಟೇಬಲ್ ಟೆನ್ನಿಸ್), ಶಿವಾನಂದ ಮೊ.8105304949 (ಹಾಕಿ ಮತ್ತು ಟೇಬಲ್ ಟೆನ್ನಿಸ್).
ಅ.02ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ಸಂಕೀರ್ಣದಲ್ಲಿ ಷಟಲ್ ಬ್ಯಾಡ್ಮಿಂಟನ್ (ನೇರವಾಗಿ ಜಿಲ್ಲಾ ಮಟ್ಟದ ಪಂದ್ಯಾವಳಿಗಳು) ನಡೆಯಲಿದ್ದು, ಮಾಹಿತಿಗಾಗಿ ಮಂಜುನಾಥ ಮೊ.9886175080, ಜಿ.ರವಿ ಮೊ.9739852460(ಷಟಲ್ ಬ್ಯಾಡ್ಮಿಂಟನ್ ಮಾತ್ರ).
ಅ.03ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್ (ಪುರಷರಿಗೆ ಮಾತ್ರ), ಥ್ರೋಬಾಲ್, ಯೋಗ, ಬಾಸ್ಕೆಟ್ ಬಾಲ್, ಕುಸ್ತಿ, ಹ್ಯಾಂಡ್ ಬಾಲ್, ಬಾಲ್ ಬ್ಯಾಡ್ಮಿಂಟನ್, ಈಜು, ಟೆನ್ನಿಸ್ ಮತ್ತು ನೆಟ್ ಬಾಲ್ ಕ್ರೀಡೆಗಳು ಆಯ್ಕೆ ಮಾಡಲಾಗುವುದು. ಮಾಹಿತಿಗಾಗಿ ಎಂ.ಜಾಕೀರ್ ಮೊ.9036335986 ಮತ್ತು ಅಥ್ಲೆಟಿಕ್ ತರಬೇತುದಾರರಾದ ರೋಹಿಣಿ ಪರ್ವತಕರ್ ಮೊ.9448830108.
ಒಬ್ಬ ಕ್ರೀಡಾ ಪಟು ಅಥವಾ ತಂಡ ಯಾವುದೇ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ, ಆಕ್ಷೇಪಣೆಯಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ನಿಯಮಾನುಸಾರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅರ್ಹರಿರುತ್ತಾರೆ. ಅಗತ್ಯವಾದಲ್ಲಿ ಆಧಾರ್ ಕಾರ್ಡ್ ಕಡ್ಡಾಯವಾಗಿ ಸಲ್ಲಿಸಬೇಕು. ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ, ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರರಲ್ಲ. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
*ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ:*
ಅ.01ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಸ್ತಕ ಸಾಲಿನ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಏರ್ಪಡಿಸಲಾಗಿದೆ. ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್ (ಪುರಷರಿಗೆ ಮಾತ್ರ), ಥ್ರೋಬಾಲ್, ಯೋಗ. ಮಾಹಿತಿಗಾಗಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರ ಮೊ.9620843723, ರೋಹಿಣಿ ಪರ್ವತ್‍ಕರ್ ಮೊ.9448830108, ಎಂ.ಜಾಕೀರ್ ಮೊ.9036335986, ಜಿ.ರವಿ ಮೊ.9739852460 ಗೆ ಸಂಪರ್ಕಿಸಬಹುದು ಎಂದು ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
---------
ಯಾವುದೇ ಪ್ರಾಣಿ ಕಡಿದ ಸಂದರ್ಭದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ: ಡಿಹೆಚ್‍ಒ ಡಾ.ವೈ.ರಮೇಶ ಬಾಬು
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಡಿದ ಸಂದರ್ಭದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆದು ಆ್ಯಂಟಿ ರೇಬಿಸ್ ಲಸಿಕೆ ಪಡೆಯುವುದರಿಂದ ರೇಬಿಸ್ ಖಾಯಿಲೆ ಬಾರದಂತೆ ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್‍ಬಾಬು ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ಅವರು ಮಾತನಾಡಿದರು.
‘ಏಕೀಕೃತ ಆರೋಗ್ಯವನ್ನು ಅಳವಡಿಸಿಕೊಳ್ಳಿ ರೇಬಿಸ್ ತಡೆಗಟ್ಟಿ’ ಈ ವರ್ಷದ ಘೋಷವಾಕ್ಯವಾಗಿದ್ದು, ಸಾರ್ವಜನಿಕರಿಗೆ ರೇಬಿಸ್ ಖಾಯಿಲೆಯ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಜನ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ‘2030ರ ವೇಳೆಗೆ ನಾಯಿ ಕಡಿತದ ಮೂಲಕ ಹರಡುವ ರೇಬಿಸ್ ಖಾಯಿಲೆಯಿಂದ ಸಂಭವಿಸುವ ಸಾವಿನ ಸಂಖ್ಯೆಯನ್ನು ಶೂನ್ಯ ಪ್ರಮಾಣಕ್ಕಿಳಿಸುವ’ ಗುರಿಯನ್ನು ಸಾಧಿಸಲು ವಿಶ್ವದಾದ್ಯಂತ ಈ ಜಾಥಕ್ಕೆ ಚಾಲನೆ ನೀಡಲಾಗಿದೆ, ನಮ್ಮ ರಾಜ್ಯ ಸೇರಿದಂತೆ ಭಾರತ ದೇಶವು ಇದೇ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಕಾರ್ಯನ್ಮುಖವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿ.ಕೆ.ಮರಿಯಂಬಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರೇಬಿಸ್ ಖಾಯಿಲೆಯು ಶೇ.100 ತಡೆಗಟ್ಟಬಹುದಾದ ಖಾಯಿಲೆಯಾಗಿದ್ದು, ನಾಯಿ ಕಚ್ಚಿದ ನಂತರ ಗಾಯವನ್ನು ಸ್ವಚ್ಚ ನೀರಿನಲ್ಲಿ 15 ನಿಮಿಷಗಳ ಕಾಲ ತೊಳೆಯುವುದರಿಂದ ಶೇ.50-70 ರೇಬಿಸ್‍ಗೆ ತುತ್ತಾಗುವುದನ್ನು ತಡೆಯಬಹುದು. Post exposure prophylaxis ಅನ್ನು ಸಂಪೂರ್ಣವಾಗಿ (ಎಲ್ಲಾ 5 ಡೋಸ್‍ಗಳನ್ನು) ಮತ್ತು Rabies Immunoglobulin ಪಡೆಯುವುದರ ಮೂಲಕ ರೇಬಿಸ್ ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.
ಮನುಷ್ಯರಿಗೆ ರೇಬಿಸ್ ರೋಗವು ಶೇ.99 ನಾಯಿ ಕಡಿತದಿಂದ ಬರುತ್ತದೆ, ಇನ್ನುಳಿದಂತೆ ಬೆಕ್ಕು, ತೋಳ, ನಾಯಿ ಸೇರಿದಂತೆ ಕಾಡು ಪ್ರಾಣಿಗಳ ಕಡಿತದಿಂದ ಶೇ.1 ಪ್ರಮಾಣದಷ್ಟು ಹರಡುತ್ತದೆ. ವಿಶ್ವಾದಾದ್ಯಂತ ಸಂಭವಿಸುವ ರೇಬಿಸ್ ಸಾವಿನ ಪ್ರಕರಣಗಳಲ್ಲಿ ಶೇ.36 ಭಾರತದಲ್ಲಿಯೇ ಸಂಭವಿಸುತ್ತಿವೆ, ಪ್ರಸ್ತುತ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣಕ್ಕೆ ಲಸಿಕೆ ಲಭ್ಯವಾಗುವ ನಿಟ್ಟಿನಲ್ಲಿ ಆ್ಯಂಟಿ ರೇಬಿಸ್ ಕ್ಲಿನಿಕ್‍ನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಭಾರತದಲ್ಲಿ ರೇಬಿಸ್ ರೋಗದಿಂದ 2012 ರಿಂದ 2020ರ ವರೆಗೆ ಸುಮಾರು 7000 ಜನರು ಪ್ರತಿ ವರ್ಷ ಸಾವನ್ನಪ್ಪಿದ್ದಾರೆ ಹಾಗೂ ಶೇ.40ರಷ್ಟು ನಾಯಿ ಕಡಿತಗಳು 15 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಸಂಭವಿಸಿರುವುದು ಕಳವಳಕಾರಿಯಾದ ಸಂಗತಿಯಾಗಿದೆ. ಮಕ್ಕಳಲ್ಲಿ ನಾಯಿ ಕಚ್ಚಿದರೆ ಹೆಚ್ಚಿನ ಸಂದರ್ಭಗಳಲ್ಲಿ ಪೋಷಕರ ಅಥವಾ ಸಂಬಂಧಪಟ್ಟವರ ಗಮನಕ್ಕೆ ಬರುವುದಿಲ್ಲ ಇದು ಕೂಡ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. 2023ನೇ ಸಾಲಿನಲ್ಲಿ ಈವರೆಗೂ ಸರಾಸರಿ ಪ್ರತಿ ತಿಂಗಳಿಗೆ 1078 ನಾಯಿ ಕಡಿತ ಪ್ರಕರಣಗಳು ವರದಿಯಾಗುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಸಂಪೂರ್ಣ ಲಸಿಕೆಯನ್ನು ಪಡೆಯುವ ಕುರಿತು ಜನ ಸಾಮಾನ್ಯರಲ್ಲಿ ಹೆಚ್ಚಿನ ಅರಿವು ಜಾಗೃತಿ ಮೂಡಿಸಲು ಇಂದಿನ ಜಾಥ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 2022ನೇ ಡಿ.05ರಂದು ‘The Karnataka Epidemic Disease Act, 2020’ ರಡಿಯಲ್ಲಿ ರೇಬಿಸ್ ರೋಗವನ್ನು ‘Notifiable Disease’ ಎಂದು ಘೋಷಿಸಲಾಗಿದ್ದು, ಬಳ್ಳಾರಿಯ ಜಿಲ್ಲಾ ಸರ್ವೇಕ್ಷಣಾ ಘಟಕವು ಎನ್.ಆರ್.ಸಿ.ಪಿ ಕಾರ್ಯಕ್ರಮದಡಿಯಲ್ಲಿ ಎಲ್ಲಾ ಪ್ರಾಣಿ ಮತ್ತು ನಾಯಿ ಕಡಿತ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪರಿವೀಕ್ಷಣೆಯಲ್ಲಿ ಇಟ್ಟಿದ್ದು, ರೋಗ ನಿಯಂತ್ರಣ ಚಟುವಟಿಕೆಗಳನ್ನು ಬಲಪಡಿಸಲು ತರಬೇತಿ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಹಾಗೂ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಂತರ್ ಇಲಾಖಾ ಸಹಕಾರ ಅತ್ಯವಶ್ಯಕವೆಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ರೇಬಿಸ್ ಖಾಯಿಲೆಗೆ ಒಮ್ಮೆ ತುತ್ತಾದ ಬಳಿಕ ಯಾವುದೇ ಚಿಕಿತ್ಸೆ ಇರುವುದಿಲ್ಲವಾದರೂ ರೇಬಿಸ್ ಖಾಯಿಲೆಯು ಸೂಕ್ತ ಪೂರ್ವ ರೋಗ ನಿರೋಧಕ ಲಸಿಕೆ ಪಡೆಯುವುದರಿಂದ ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಪ್ರಾಣಿ ಕಡಿತ ಸಂದರ್ಭದಲ್ಲಿ ಗಾಬರಿಪಡದೆ ನಾಯಿ ಅಥವಾ ಪ್ರಾಣಿ ಕಡಿತದ 24 ಗಂಟೆಯೊಳಗೆ ಆ್ಯಂಟಿ ರೇಬಿಸ್ ಲಸಿಕೆಯನ್ನು ತಪ್ಪದೇ ಪಡೆದುಕೊಳ್ಳಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಎಸ್.ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಜಿಲ್ಲಾ ಎಪಿಡಮಾಲಾಜಿಸ್ಟ್ ಡಾ.ಪ್ರಿಯಾಂಕ, ಜಿಲ್ಲಾ ಮೈಕ್ರೋಬಯಾಲಾಜಿಸ್ಟ್ ಶರತ್ ಬಾಬು, ಎನ್.ಸಿ.ಡಿ ಜಿಲ್ಲಾ ಕನ್ಸಲ್‍ಟೆಂಟ್ ಡಾ.ಜಬೀನ್‍ತಾಜ್, ಮಾರ್ಗರೇಟ್, ಟ್ಯೂಟರ್ ಉಪಸ್ಥಿತರಿದ್ದರು.
ವಿಮ್ಸ್ ಶುಶ್ರೂಷಣಾ ಪ್ರಶಿಕ್ಷಣಾರ್ಥಿಗಳು, ಆಶಾ ಕಾರ್ಯಕರ್ತೆಯರು, ಸರ್ವೇಕ್ಷಣಾ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಒಳಗೊಂಡಂತೆ ಜಾಗೃತಿ ಜಾಥಾವು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಸಂಗಂ ವೃತ್ತ, ರಾಯಲ್ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿವರೆಗೆ ಸಂಚರಿಸಿ ಜಾಗೃತಿ ಮೂಡಿಸಲಾಯಿತು.
--------
ಅಪರಿಚಿತ ಮೃತ ಗಂಡಸಿನ ಶವ ಪತ್ತೆ; ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ನಗರದ ಹೊಸಪೇಟೆ ರಸ್ತೆಯ ಅರಣ್ಯ ಇಲಾಖೆಯ ಕಚೇರಿಯ ಕಾಂಪೌಂಡ್ ಗೋಡೆಯ ಹತ್ತಿರ ಸುಮಾರು 50 ರಿಂದ 55 ವರ್ಷದ ಅಪರಿಚಿತ ಮೃತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಮೃತನ ಪತ್ತೆಗೆ ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯು ಮನವಿ ಮಾಡಿದೆ.
ಚಹರೆ ಗುರುತು: ಸುಮಾರು 5.6 ಅಡಿ ಎತ್ತರ, ದುಂಡಮುಖ, ಗೋದಿ ಮೈಬಣ್ಣ ಇದ್ದು, ಮೈಮೇಲೆ ನೀಲಿ ಮತ್ತು ತಿಳಿ ಹಸಿರು ಬಣ್ಣದ ಡಿಸೈನ್‍ವುಳ್ಳ ಅಂಗಿ ಮತ್ತು ಕಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ.08392-276461, ಮೊ.9480803049 ಹಾಗೂ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ ದೂ.083922-258100 ಗೆ ಸಂಪರ್ಕಿಸಬಹುದಾಗಿದೆ.
--------
ಕಲಬುರ್ಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ ಅ.05ರಂದು
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನ ಕಲಬುರ್ಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಅಕ್ಟೋಬರ್ 05ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.
*ಕ್ರೀಡೆಗಳು:* ಫುಟ್ಬಾಲ್, ಹಾಕಿ, ನೆಟ್ ಬಾಲ್, ಬಾಸ್ಕೆಟ್ ಬಾಲ್, ವೇಟ್‍ಲಿಫ್ಟಿಂಗ್ ಮತ್ತು ಯೋಗ.
*ನಿಬಂಧನೆಗಳು:* ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ, ಆಕ್ಷೇಪಣೆ ಯಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ನಿಯಮಾನುಸಾರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು.
ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳಿಗೆ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರತ್ತಾರೆ. ಹೊರ ರಾಜ್ಯದ ಕ್ರೀಡಾಪಟುಗಳ ಪ್ರಕರಣಗಳು ಬಂದಲ್ಲಿ ಆಧಾರ್ ಕಾರ್ಡ್ ಕಡ್ಡಾಯವಾಗಿ ಸಲ್ಲಿಸÀಬೇಕು. ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ, ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರರಲ್ಲ. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಎಂ.ಜಾಕೀರ್ ಅವರ ಮೊ.9036335986 ಹಾಗೂ ಜಿ.ರವಿ ಅವರ ಮೊ.9739852460 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
--------
ಅ.01ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅ.01ರಂದು ಬೆಳಿಗ್ಗೆ 10.30ಕ್ಕೆ ಬಳ್ಳಾರಿಯ ಪಾರ್ವತಿ ನಗರದ ಪೊಲೀಸ್ ಜಿಮ್‍ಖಾನ, ಇಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಮೆಣಸಿನಕಾಯಿ ಬೆಳೆಯಲ್ಲಿ ಸೊರಗು(ವಿಲ್ಟ್) ರೋಗ ಮತ್ತು ಕರಿಹೇನು ನಿರ್ವಹಣೆಗೆ ಈ ಕ್ರಮ ಕೈಗೊಳ್ಳಿ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲೂಕಿನಲ್ಲಿ ಬೆಳೆದಿರುವ ಮೆಣಸಿನಕಾಯಿ ಬೆಳೆಗೆ ಸೊರಗು ರೋಗ ಮತ್ತು ಕರಿಹೇನಿನ ಹಾವಳಿ ಜಾಸ್ತಿಯಾಗುತ್ತಿರುವುದರಿಂದ ರೈತರು ಈ ಕೆಳಕಂಡ ಕ್ರಮವನ್ನು ಕೈಗೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ರತ್ನಪ್ರಿಯಾ ಯರೆಂಗಲ್ ತಿಳಿಸಿದ್ದಾರೆ.
*ಸೊರಗು ರೋಗದ (ವಿಲ್ಟ್) ನಿರ್ವಹಣೆ ಕ್ರಮಗಳು:*
ಹೊಲಗಳಲ್ಲಿ ನೀರು ನಿಲ್ಲದಂತೆ ಬಸಿ ಕಾಲುವೆಗಳನ್ನು ತೆಗೆದು ಸಂಪೂರ್ಣ ನೀರು ಹೊರ ಹೋಗುವಂತೆ ಮಾಡಬೇಕು. ಸೋಡೋಮೋನಸ್ ಪ್ಲೋರೋಸೆಸ್ಸ್ ಪ್ಲೋರೆಸೆಸ್ಸ್ (ಜೈವಿಕ ಬ್ಯಾಕ್ಟಿರಿಯಾ) 5 ಮಿ.ಲೀ/ಗ್ರಾಂ ಪ್ರತಿ ಲೀಟರ್ ನೀರಿಗೆ ಸಿಂಪಡಣೆ ಮಾಡುವುದು ಮತ್ತು ಗಿಡಗಳ ಬುಡಕ್ಕೆ ಬಿಡುವುದು. ಟಾಟಾ ಮಾಸ್ಟರ್ (ಮೆಟಲ್ಯಾಕ್ಸಿಲ್ ಶೇ.8 ಜೊತೆಗೆ ಮ್ಯಾಂಕೋಜೆಬ್ ಶೇ.64) 2 ಗ್ರಾಂ ಪ್ರತಿ ಲೀಟರ್ ನೀರಿಗೆ ಹಾಕಿ ಸಿಂಪಡಣೆ ಮಾಡುವುದು ಮತ್ತು ಗಿಡಗಳ ಬುಡಕ್ಕೆ ಬಿಡಬೇಕು. 19:19:19 (ಎನ್‍ಪಿಕೆ) 5 ಗ್ರಾಂ ಪ್ರತಿ ಲೀಟರ್ ನೀರಿಗೆ ಜೊತೆಗೆ ಲಿಬರಲ್ (ಲಘು ಪೋಷಕಾಂಶಗಳ ಮಿಶ್ರಿತ) 1 ಗ್ರಾಂ ಪ್ರತಿ ಲೀಟರ್ ನೀರಿಗೆ ಹಾಕಿ ಸಿಂಪಡಣೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
*ಕರಿಹೇನು ನಿರ್ವಹಣೆ(ಬ್ಲಾಕ್ ಥ್ರಿಪ್ಸ್) ನಿರ್ವಹಣೆ ಕ್ರಮಗಳು:*
ಗಿಡದಿಂದ ಗಿಡಕ್ಕೆ ಸೂಕ್ತ ಅಂತರ ಕಾಪಾಡುವುದು ಅತ್ಯಗತ್ಯವಾಗಿದ್ದು, ಬೇವೆರಿಯ ಬೇಸಿಯಾನ ಜೈವಿಕ ಕೀಟನಾಶಕವನ್ನು 5ರಿಂದ 10ಗ್ರಾಂ ಪ್ರತಿ ಲೀಟರ್ ನೀರಿಗೆ ಬೇರೆಸಿ ಸಿಂಪಡಿಸುವುದು. ಬದುಗಳ ಸುತ್ತ ಜೋಳ ಅಥವಾ ಸಜ್ಜೆಯಂತಹ ಬೆಳೆಗಳನ್ನು ಬೆಳೆಯುವುದರಿಂದ ಕೀಟ ಪಸರಿಸುವುದನ್ನು ತಡೆಗಟ್ಟಬಹುದು.
ಮುವೆಂಟೊ ಓಡಿ 2ಮಿ.ಲೀ ಮತ್ತು ಅಲಂಟೋ 1.5 ಮಿ.ಲೀ ಮತ್ತು ಬೇವಿನ ಹೆಣ್ಣೆ 5ಮಿ.ಲೀ ಪ್ರತಿ ಲೀಟರ್‍ಗೆ ನೀರಿಗೆ ಬೆರಸಿ ಸಿಂಪರಣೆ ಮಾಡುವುದು. ನಾಲ್ಕು ದಿನದ ನಂತರ ಸ್ಪೈನೋಸಾಡ್ 0.3ಮಿ.ಲೀ ಮತ್ತು ಸಿವಾಂಟೋ 2ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡುವುದು.
ಒಂದು ವಾರದ ನಂತರ ಮುವೆಂಟೊ ಓಡಿ 2ಮಿ.ಲೀ ಮತ್ತು ಸಿವಾಂಟೋ 2ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡುವುದು. ಅಥವಾ ಡೈನೋಟೆಫ್ಯೂರಾನ್ (ಟೋಕಾನ್) 0.4 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡುವುದು. ಸ್ಪೈನೋಸಾಡ್ (ಟ್ರೇಸರ್) 0.3ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡುವುದು. ಸ್ಪೈನೋಟೋರಾಮ್ (ಡಿಲಿಗೇಟ್) 0.5ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಣೆ ಮಾಡುವುದು.
ರೈತರ ತಾಕುಗಳಲ್ಲಿ ಹೆಚ್ಚಿನ ಕರಿಹೇನು ಕೀಟ (ಬ್ಲಾಕ್ ಥ್ರೀಪ್ಸ್) ಬಾದೆ ಕಂಡುಬಂದಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಬಳ್ಳಾರಿ ಪ್ರಾದೇಶಿಕ ಸಾರಿಗೆ ಕಚೇರಿ: ಮೂರುವರೆ ಕೋಟಿ ರೂ. ವಾಹನ ತೆರಿಗೆ ಬಾಕಿ ತೆರಿಗೆ ಪಾವತಿಸದವರ ವಿರುದ್ಧ ಸೂಕ್ತ ಕಾನೂನು ಕ್ರಮ: ಎನ್.ಶೇಖರ್
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ಬಳ್ಳಾರಿ ಪ್ರಾದೇಶಿಕ ಸಾರಿಗೆ ಕಚೇರಿ ವ್ಯಾಪ್ತಿಯಲ್ಲಿ ಈವರೆಗೆ ಒಟ್ಟು 7682 ವಾಹನಗಳಿಂದ 3,59,38,111 ರೂ. ರಸ್ತೆ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಇಲಾಖೆಯು ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಕೂಡ ಕಳುಹಿಸಿದೆ. ಜತೆಗೆ ನೋಟಿಸ್‍ಗೂ ತೆರಿಗೆ ಪಾವತಿಸದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್.ಶೇಖರ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಆರ್.ಟಿ.ಓ ಕಚೇರಿ ವ್ಯಾಪ್ತಿಯಲ್ಲಿ ಬಾಕಿ ಇರುವ ತೆರಿಗೆ ವಸೂಲಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ನೋಟಿಸ್ ನೀಡಿದ ನಂತರವೂ ತೆರಿಗೆ ಪಾವತಿಗೆ ಮುಂದಾಗದಿದ್ದರೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಕಾನೂನು ರೀತಿಯ ಶಿಕ್ಷೆಗೆ ಒಳಪಡಿಸಲು ಸನ್ನದ್ಧವಾಗಿದ್ದು, ಕೂಡಲೇ ಬಾಕಿ ತೆರಿಗೆಯನ್ನು ಇ-ಪೇಮೆಂಟ್ ಮೂಲಕ ಪಾವತಿಸಲು ಸೂಚಿಸಿದೆ. ಸರ್ಕಾರಕ್ಕೆ ವಾರ್ಷಿಕವಾಗಿ ಕೋಟ್ಯಾಂತರ ರಾಜಸ್ವ ಸಂಗ್ರಹಿಸಿ ನೀಡುವ ಆರ್.ಟಿ.ಓ ಕಚೇರಿಯು ಮೋಟಾರು ವಾಹನ ತೆರಿಗೆ ಬಾಕಿದಾರರಿಂದ ವಸೂಲಿ ಆಗಬೇಕಿರುವ ಮೊತ್ತವನ್ನು ವಸೂಲಿಗೆ ಮುಂದಾಗಿದೆ ಎಂದು ಎನ್.ಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*7682 ವಾಹನಗಳಿಂದ ರೂ.3,59,38111 ಬಾಕಿ (ಎಂ.ವಿ.ಡಿ-1 ಮತ್ತು ಎಂ.ವಿ.ಡಿ-2):*
ಬಳ್ಳಾರಿ ಆರ್.ಟಿ.ಓ ಕಚೇರಿ ವ್ಯಾಪ್ತಿಯಲ್ಲಿ ಈವರೆಗೆ ಒಟ್ಟು 7682 ವಾಹನಗಳಿಂದ 3,59,38,111 ರೂ. ರಸ್ತೆ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ತೆರಿಗೆ ಪಾವತಿಗೆ ಇಲಾಖೆಯಿಂದ 7682 ವಾಹನಗಳಿಗೆ ತಗಾದೆ ನೋಟೀಸ್ ನೀಡಲಾಗಿದೆ. ಆದರೂ ಸಹ ಬಾಕಿದಾರರು ತೆರಿಗೆ ಕಟ್ಟಿರುವುದಿಲ್ಲ. ಕಾರಣ ವಿಳಂಬ ಪಾವತಿಗಾಗಿ ಕೆಎಂವಿಟಿ 1957(12ಎ) ರಡಿ ವಿಳಂಬ ಪಾವತಿಗಾಗಿ ಘನ ನ್ಯಾಯಾಲಯದಲ್ಲಿ ಧಾವೆ ಹೂಡಲಾಗುವುದು ಹಾಗೂ ಬಹುತೇಕ ವಾಹನ ಮಾಲೀಕರು ಸುಮಾರು 1 ಲಕ್ಷ ರೂ. ಗಿಂತಲೂ ಹೆಚ್ಚಿನ ಮೊತ್ತ ಪಾವತಿಸಬೇಕಿದೆ. 2022ರಲ್ಲಿ ಬಳ್ಳಾರಿ ಆರ್.ಟಿ.ಓ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ 154 ವಾಹನ ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಹಾಗೂ 2023ರಲ್ಲಿ ಕೂಡ ತೆರಿಗೆ ಬಾಕಿ ಉಳಿಸಿಕೊಂಡಿರುವ 35 ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದೂ ಅವರು ತಿಳಿಸಿದ್ದಾರೆ.
*ರೂ.116 ಕೋಟಿ ರಾಜಸ್ವ ಸಂಗ್ರಹ ಗುರಿ:*
ಸಾರಿಗೆ ಇಲಾಖೆಯಿಂದ ಬಳ್ಳಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸಕ್ತ ಸಾಲಿನಲ್ಲಿ 116 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ನಿಗದಿಸಲಾಗಿದ್ದು, ಇದರಲ್ಲಿ ಜುಲೈ 2023ರ ಮಾಹೆಯ ಅಂತ್ಯದ ವೇಳೆಗೆ ರೂ.36,25,60,378 ರಾಜಸ್ವ ಸಂಗ್ರಹಿಸಲಾಗಿದೆ. ನಿಗಧಿತ ರಾಜಸ್ವ ಸಂಗ್ರಹ ಗುರಿ ಸಾಧನೆಗೆ ಮೋಟಾರು ವಾಹನಗಳ ಬಾಕಿ ಇರುವ ತೆರಿಗೆ ವಸೂಲಿಗೆ ಮುಂದಾಗಿದ್ದು, ರಾಜಸ್ವ ಸಂಗ್ರಹ ಕೊರತೆ ಸರಿದೂಗಿಸಲು ಕ್ರಮ ಕೈಗೊಳ್ಳುತ್ತಿದೆ ಎಂದಿದ್ದಾರೆ.
*5372 ರಸ್ತೆ ಸುರಕ್ಷತಾ ಪ್ರಕರಣಗಳ ಗುರಿ ನಿಗದಿ:*
ಬಳ್ಳಾರಿ ಆರ್.ಟಿ.ಓ. ಕಚೇರಿಗೆ ರಸ್ತೆ ಸುರಕ್ಷತಾ ಪ್ರಕರಣಗಳನ್ನು ದಾಖಲಿಸಲು 5372 ಪ್ರಕರಣಗಳ ಗುರಿ ನಿಗದಿಪಡಿಸಲಾಗಿದ್ದು, ಜುಲೈ 2023 ಮಾಹೆಯ ಅಂತ್ಯದ ವೇಳೆಗೆ 1173 ಪ್ರಕರಣಗಳನ್ನು ದಾಖಲಿಸಿ, ಒಟ್ಟು 13,69,664 ರೂ.ಗಳನ್ನು ವಸೂಲಿ ಮಾಡಲಾಗಿದೆ. ಪ್ರಸ್ತುತ ಕಚೇರಿಯಲ್ಲಿ 2617 ಪ್ರಕರಣಗಳು ವಿಲೇವಾರಿಗಾಗಿ ಬಾಕಿಯಿರುತ್ತವೆ.
*ದಂಡ ಮತ್ತು ಶಿಕ್ಷೆ ವಿಧಿಸಲಿರುವ ಕೋರ್ಟ್:*
ವಾಹನ ತೆರಿಗೆ ಬಾಕಿ ಉಳಿಸಿಕೊಂಡಿದ್ದವರ ವಿರುದ್ಧ ಆರ್.ಟಿ.ಓ ಕಚೇರಿಯು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಘನ ನ್ಯಾಯಾಲಯದ ತೀರ್ಪುಗಾಗಿ ಕಾಯಲಾಗುತ್ತಿದೆ. ಹಾಗೂ ಎ.ಜಿ. ಆಡಿಟ್‍ನಲ್ಲಿ 3536 ವಾಹನಗಳಿಂದ 1,59,04,548 ರೂ.ಗಳು (ತೆರಿಗೆ/ವ್ಯತ್ಯಾಸದ ತೆರಿಗೆ/ಶುಲ್ಕ/ವ್ಯತ್ಯಾಸದ ಶುಲ್ಕ/ರಸ್ತು ಸುರಕ್ಷಣೆ ಸೆಸ್) ಬಾಕಿ ಇದ್ದು, ಸಂಬಂಧಪಟ್ಟ ವಾಹನ ಮಾಲೀಕರುಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮತ್ತು ಪಿ.ಸಿ.ಎ(ಆಡಿಟ್) ನಲ್ಲಿ 15 ವಾಹನಗಳಿಂದ 16,26,786 ರೂ.ಗಳು ತೆರಿಗೆ ಬಾಕಿ ಇದ್ದು, ಘನ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ, ತೆರಿಗೆ ಬಾಕಿದಾರರಿಗೆ ದಂಡ ವಿಧಿಸುವ ಅಥವಾ ಜೈಲು ಶಿಕ್ಷೆ ಆಗುವ ನಿರೀಕ್ಷೆಯಲ್ಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್.ಶೇಖರ್ ಅವರು ತಿಳಿಸಿದ್ದಾರೆ.
*ಅಧಿಕ ಭಾರದ ವಾಹನಗಳ ಸಂಚಾರದ ವಿರುದ್ಧ ಸೂಕ್ತ ಕಾನೂನು ಕ್ರಮ:*
ಅಧಿಕ ಭಾರ ಹೊತ್ತೊಯ್ಯುವ ವಾಹನಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಟ್ರಾನ್ಸ್‍ಪೆÇೀರ್ಟ್ ಕಂಪನಿಯ ಮಾಲೀಕರಿಗೆ ಹಾಗೂ ಕಾರ್ಖಾನೆಯ ಮಾಲೀಕರುಗಳಿಗೆ 250 ನೋಟೀಸ್‍ಗಳನ್ನು ಜಾರಿ ಮಾಡಲಾಗಿದೆ. ಪ್ರವರ್ತನ ಕಾರ್ಯದ ಮೂಲಕ ಜುಲೈ 2023ರ ಮಾಹೆಯ ಅಂತ್ಯದ ವೇಳೆಗೆ 30 ಪ್ರಕರಣಗಳನ್ನು ದಾಖಲಿಸಿದ್ದು, 01 ವಾಹನವನ್ನು ಜಪ್ತು ಮಾಡಲಾಗಿದೆ. ಅವುಗಳಿಂದ 4,48,500 ರೂಗಳನ್ನು ವಸೂಲಿ ಮಾಡಲಾಗಿದೆ.
ಕಾರ್ಖಾನೆಯ ಮಾಲೀಕರುಗಳಿಗೆ ಹಾಗೂ ಸರಕು ಸಾಕಾಣಿಕೆದಾರರಿಗೆ ಅಧಿಕ ಭಾರವನ್ನು ರವಾನಿಸದಂತೆ ಮೋಟಾರು ವಾಹನಗಳ ಅಧಿನಿಯಮ ಸೆಕ್ಷನ್ 113 ಆರ್‍ಡಬ್ಲ್ಯೂ 194 ರಡಿ ಸರ್ವೋಚ್ಛ ನ್ಯಾಯಾಲಯ ಆದೇಶವಿದೆ. ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ಕಾರ್ಖಾನೆಯವರು, ಮಾಲೀಕರನ್ನೇ ಆಪಾದಿತರನ್ನಾಗಿ ಮಾಡಲು ಸಹ ಅವಕಾಶವಿದೆ.
ಆದ್ದರಿಂದ ತೆರಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ವಾಹನ ಮಾಲೀಕರು ತಮ್ಮ ದಾಖಲೆಗಳನ್ನು ಪರಿಶೀಲಿಸಿ ತೆರಿಗೆ ಬಾಕಿ ಇದ್ದಲ್ಲಿ, ಸಾರಿಗೆ ಇಲಾಖೆಯ ವಾಹನ ಪೆÇೀರ್ಟಲ್ ಮೂಲಕ ಇ-ಪೇಮೆಂಟ್ ಅಥವಾ ಈ ಕಚೇರಿಗೆ ಡಿ.ಡಿ ಮೂಲಕ ತೆರಿಗೆ ಪಾವತಿಸಲು ಸೂಚಿಸಿದ್ದು, ತಪ್ಪಿದಲ್ಲಿ ವಾಹನ ಮಾಲೀಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ವಾಹನಗಳನ್ನು ಸೀಜ್ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್.ಶೇಖರ್ ಅವರು ತಿಳಿಸಿದ್ದಾರೆ.
--------
ಬಳ್ಳಾರಿ ಮಹಾನಗರ ಪಾಲಿಕೆಯಿಂದ ಸ್ವಚ್ಚತಾ “ಶ್ರಮದಾನ” ಕಾರ್ಯಕ್ರಮ ಸಾರ್ವಜನಿಕರಿಗೆ ಸ್ವಚ್ಛತಾ ಅರಿವು ಅಗತ್ಯ: ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ಸಾರ್ವಜನಿಕರು ಕಸವನ್ನು ನಿಗದಿಪಡಿಸಿದ ಸ್ಥಳದಲ್ಲಿಯೇ ಹಾಕಬೇಕು. ಹಸಿಕಸ, ಒಣಕಸ ವಿಂಗಡಣೆ ಮಾಡಿ ಪಾಲಿಕೆಯ ತ್ಯಾಜ್ಯ ವಸ್ತು ವಿಲೇವಾರಿ ವಾಹನಗಳಿಗೆ ನೀಡಬೇಕು. ಪ್ಲಾಸ್ಟಿಕ್ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಕೆ ಅರಿವು ಅಗತ್ಯವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್ ಅವರು ಹೇಳಿದರು.
ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿಯ ಸ್ಮರಣಾರ್ಥವಾಗಿ ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ನಿರ್ದೇಶನದಂತೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಚತೆಯೇ ಸೇವೆಯಡಿ ಶುಕ್ರವಾರದಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಾಂಸ್ಕøತಿಕ ಸಮುಚ್ಚಯ ಆವರಣದಲ್ಲಿ ಸ್ವಚ್ಚತೆಯ “ಶ್ರಮದಾನ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ನೈರ್ಮಲ್ಯ ಕುರಿತಾಗಿ ನಗರದಲ್ಲಿ ಮೂರು ದಿನಗಳ ಸ್ವಚ್ಛತಾ “ಶ್ರಮದಾನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಭಾಗಿಯಾಗುವಂತೆ ಮನವಿ ಮಾಡಿದರು.
“ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಆವರಣದಲ್ಲಿ ದಿನನಿತ್ಯವೂ ಮುಂಜಾನೆ ಮತ್ತು ಸಂಜೆ ಹೊತ್ತಿನಲ್ಲಿ ಸುಮಾರು ನೂರಕ್ಕೂ ಅಧಿಕ ಸಾರ್ವಜನಿಕರು, ಹಿರಿಯ ನಾಗರಿಕರು ವಾಕಿಂಗ್‍ಗೆ ಬರುತ್ತಾರೆ ಹಾಗೂ ವಿದ್ಯಾರ್ಥಿಗಳು ಅಭ್ಯಸಿಸಲು ಕ್ರೇಂದ್ರ ಗ್ರಂಥಾಲಯಕ್ಕೆ ಬರುತ್ತಾರೆ. ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಇಂತಹ ಸ್ವಚ್ಛತಾ ಕಾರ್ಯಕಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಸ್ವಚ್ಛತಾ ‘ಶ್ರಮದಾನ’ದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ವಚ್ಛತಾ “ಶ್ರಮದಾನ” ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಬಿ.ಜಾನಕಿ, ಮಹಾನಗರ ಪಾಲಿಕೆಯ 21ನೇ ವಾರ್ಡಿನ ಸದಸ್ಯ ಅಶೋಕ ಕುಮಾರ್, ಮಿನೇರಾ ಸ್ಟೀಲ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್‍ನ ನಿರ್ದೇಶಕ ಟಿ.ಹನುಮಂತರೆಡ್ಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾಜಿರಾವ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕಿ ಲಕ್ಷ್ಮೀ ಕಿರಣ್, ಮುಖಂಡರಾದ ವೆಂಕಟರೆಡ್ಡಿ, ಶಂಕರ್, ಕಿರಣ, ಶಶಿಧರ ಹಾಗೂ ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
---------
ನವೆಂಬರ್ 6 ರವರೆಗೆ ಪದವೀಧರ ಮತದಾರರ ನೋಂದಣಿಗೆ ಅವಕಾಶ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಮತದಾನ ನೋಂದಣಾಧಿಕಾರಿಗಳು ಸಹ ಈ ನಿಟ್ಟಿನಲ್ಲಿ ಆಯೋಗದ ಸೂಚನೆಯನ್ವಯ ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಕಾರ್ಯಪ್ರವೃತ್ತರಾಗಲು ಸೂಚಿಸಿರುತ್ತಾರೆ. ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು, ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ/ಬಳ್ಳಾರಿ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ.
ಅರ್ಹತಾ ದಿನಾಂಕ 01.11.2023ಕ್ಕೆ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಕರ್ನಾಟಕ ಈಶಾನ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಈ ಕೆಳಗಿನಂತೆ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.
*ವೇಳಾಪಟ್ಟಿ:*
ಅರ್ಜಿ ನಮೂನೆ-18 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ ಮತ್ತು ದಿನ: 06.11.2023 (ಸೋಮವಾರ), ಕರಡು ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಮತ್ತು ದಿನ: 23.11.2023 (ಗುರುವಾರ), ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗದಿಪಡಿಸಿದ ಅವಧಿ: 23.11.2023 (ಗುರುವಾರ) ರಿಂದ 09.12.2023 (ಶನಿವಾರ), ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಮತ್ತು ದಿನ: 30.12.2023 (ಶನಿವಾರ) ಆಗಿರುತ್ತದೆ.
*ಮಾರ್ಗಸೂಚಿಗಳು:*
ಅರ್ಹತಾ ದಿನಾಂಕ 01.11.2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01.11.2020 ಕ್ಕಿಂತಲು ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ದಿನಾಂಕ 01.11.2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸ್ಥಳದ ದಾಖಲೆಗಳನ್ನು ಸ್ವಯಂಧೃಡೀಕರಿಸಿ ಅಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ದಿನಾಂಕ 06.11.2023ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೋಂದಣಾಧಿಕಾರಿಗಳು/ಸಂಬಂಧಪಟ್ಟ ವಿಧಾನಸಭಾ ಮತಕೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.
ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ದಿನಾಂಕ 06.11.2023ರ ಒಳಗಾಗಿ ನೀಡಬಹುದು.
ವಕೀಲರು, ವೈದ್ಯರು, ಚಾರ್ಟರ್ಡ ಅಕೌಂಟೆಂಟರು ಹಾಗೂ ನೊಂದಾಯಿತ ಇಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಬಹುದು. ಪ್ರಮಾಣ ಪತ್ರದೊದಡನೆ ಕ್ಷೇಮೆಂಟುದಾರನು ತಾನು ಓದಿದ ಕಾಲೇಜಿನ ಪ್ರಾಂಶುಪಾಲರು ಅಥವಾ ಸಂಬಂಧಪಟ್ಟ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‍ಗಳಿಂದ ಪ್ರಮಾಣ ಪತ್ರ ಪಡೆದು ಅರ್ಜಿ ಸಲ್ಲಿಸಬಹುದು.
ಫಾರಂ-18 ಈಗಾಗಲೇ ಎಲ್ಲಾ ಗೊತ್ತುಪಡಿಸಿದ ಅಧಿಕಾರಿಗಳಿಗೆ ಒದಗಿಸಲಾಗಿದೆ. ಫಾರಂ-18 ನ್ನು ಅರ್ಹ ಮತದಾರರು ಉಚಿತವಾಗಿ ಸಂಬಂಧಪಟ್ಟ ಕಚೇರಿಯಿಂದ ಪಡೆಯಬಹುದಾಗಿದೆ. ಅರ್ಹ ಪದವೀಧರರು ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣಾ ಗುರುತಿನ ಚೀಟಿಯ ಎಪಿಕ್ ನಂಬರ್ ಮಾಹಿತಿಯನ್ನು ಒದಗಿಸಬೇಕು.
ಅರ್ಹ ಪದವೀಧರರು ಮೂಲ ಪದವಿ ಪ್ರಮಾಣ ಪತ್ರ ಮತ್ತು ಅದರ ಪ್ರತಿಯನ್ನು ಸ್ವಯಂ ಧೃಡೀಕರಿಸಿಕೊಂಡು, ಗೊತ್ತುಪಡಿಸಿದ ಅಧಿಕಾರಿಯ ಮುಂದೆ ಖುದ್ದು ಹಾಜರಾಗಿ ಅವರಿಂದ ದೃಢೀಕರಿಸಿಕೊಂಡು ಅವರಲ್ಲಿಯೇ ಅರ್ಜಿಯನ್ನು ಕಡ್ಡಾಯವಾಗಿ ನೀಡಬೇಕು. ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಿದಲ್ಲಿ ಅಂತಹ ಅರ್ಜಿದಾರರಿಗೆ ಗೊತ್ತು ಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡುತ್ತಾರೆ. ವಿಚಾರಣೆಗೆ ಹಾಜರಾಗದೇ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಗಳು ತಿರಸ್ಕøತಗೊಳ್ಳುತ್ತವೆ. ಬಲ್ಕ (ಗುಚ್ಚಗಳಲ್ಲಿ) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಆಯೋಗವು ಮುಂಬರುವ ದಿನಗಳಲ್ಲಿ ಸದರಿ ನಮೂನೆ-18 ರ ಅರ್ಜಿಗಳನ್ನು ಇಆರ್‍ಎಂಎಸ್ (ERMS) ನಲ್ಲಿ ಅಳವಡಿಸಲು ಉದ್ದೇಶಿಸಿರುತ್ತಾರೆ. ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತದ ಮತದಾರರ ಪಟ್ಟಿ ಸಿದ್ದಪಡಿಸಿಕೊಳ್ಳುವ ಕುರಿತು ಹಾಗೂ ಚುನಾವಣಾ ಪೂರ್ವ ತಯಾರಿ ಮಾಡಿಕೊಳ್ಳುವಂತೆ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬಂಧಪಟ್ಟವರಿಗೆ ಈ ಕಾರ್ಯಾಲಯದಿಂದ ನಿರ್ದೇಶನ ನೀಡಲಾಗಿದೆ.
ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸತಕ್ಕದ್ದು.
ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಎಲ್ಲಾ ಅರ್ಹ ಮತದಾರರು ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
--------
ಬುಧವಾರ, ಸೆಪ್ಟೆಂಬರ್ 27, 2023
ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಸೆ.29ರಂದು
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ರೇಬಿಸ್ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ನಗರದ ಜಿಲ್ಲಾಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆವರಣದಿಂದ ಸೆ.29ರಂದು ಬೆಳಿಗ್ಗೆ 09ಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಅವರು ತಿಳಿಸಿದ್ದಾರೆ.
*ಜಾಥಾ ಮಾರ್ಗ:* ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಸಂಗಮ್ ವೃತ್ತ, ರಾಘವೇಂದ್ರ ಚಿತ್ರ ಮಂದಿರ ವೃತ್ತ, ಮೀನಾಕ್ಷಿ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮರಳಿ, ಗಡಿಗಿ ಚೆನ್ನಪ್ಪ ವೃತ್ತ ಮೂಲಕ ಜಿಲ್ಲಾಸ್ಪತ್ರೆ ಆವರಣಕ್ಕೆ ಮುಕ್ತಾಯಗೊಳ್ಳಲಿದೆ.
---------
ಬಳ್ಳಾರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿರುವ ಬಳ್ಳಾರಿ ಕೋಟೆ, ಸಂಗನಕಲ್ಲು ಗುಡ್ಡ ಸೇರಿದಂತೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಇರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಪ್ರವಾಸಿ ತಾಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಹೋಟೆಲ್ ಮಾಲೀಕರ ಸಂಘ ಇವರ ಸಹಯೋಗದಲ್ಲಿ “ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು (TOURISM and GREEN INVESTMENTS)” ಎಂಬ ಸಂದೇಶದಡಿಯಲ್ಲಿ ನಗರದ ನೆಲ್ಲಚೇರವು ಕೆರೆಯ ಬಳಿ ಇರುವ ಡಾ.ಪುನೀತ್ ರಾಜ್‍ಕುಮಾರ್ ಪುತ್ತಳಿಯ ಮುಂಭಾಗ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ಯುನೆಸ್ಕೋದ ವಿಶ್ವ ಪಾರಂಪರಿಕ ತಾಣವಾದ ಹಂಪಿಯು ಬಳ್ಳಾರಿ ಜಿಲ್ಲೆಯಲ್ಲಿ ಇತ್ತು. ಜಿಲ್ಲೆ ವಿಭಜನೆ ನಂತರ ಹಂಪಿಯು ವಿಜಯನಗರ ಜಿಲ್ಲೆಗೆ ಸೇರಿದ ನಂತರ ಬಳ್ಳಾರಿ ಜಿಲ್ಲೆಯಲ್ಲಿ ನಾನಾ ಪ್ರವಾಸಿ ತಾಣಗಳಿವೆ. ಅವುಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಪ್ರವಾಸಿ ತಾಣವಾಗಿ ರೂಪಿಸಲಾಗುವುದು. ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸುವ ಕೆಲಸವನ್ನು ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ವಿದ್ಯಾರ್ಥಿಗಳೇ ಬ್ರಾಂಡ್ ಅಂಬಾಸಿಡರ್‍ಗಳಾಗಿದ್ದು, ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂಲಕ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಿಂಗಳ ಅಂತ್ಯದಲ್ಲಿ 1 ಮತ್ತು 2 ಎರಡು ದಿನಗಳ ಪ್ರವಾಸ ಕಾರ್ಯಕ್ರಮವನ್ನು ಈಗಾಗಲೇ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ–2023ರ ಅಂಗವಾಗಿ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ, ಪ್ರಬಂಧ, ಚರ್ಚಾಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಮೇಯರ್ ಬಿ.ಜಾನಕಿ, ಪ್ರವಾಸೋದ್ಯಮ ಇಲಾಖೆಯ ಶ್ರೀಹರಿ ಮಾಸನೂರು, ಡಾ.ಕಲ್ಯಾಣಿ.ವೈ, ಪ್ರವಾಸಿ ಅಧಿಕಾರಿಗಳಾದ ಡೆಂಗಿ ಶಿವಲಿಂಗಪ್ಪ, ಪ್ರಶಾಂತ್ ಕುಮಾರ್‍ಎ.ಎಮ್ ಹಾಗೂ ಪ್ರವಾಸಿ ಮಿತ್ರ ಸಿಬ್ಬಂದಿಗಳು ಮತ್ತು ವಿವಿಧ ಕಾಲೇಜುಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
--------
ಪ್ರಾಯೋಗಿಕ ಅನುಭವದ ಕಲಿಕೆ ಅತ್ಯಂತ ಪರಿಣಾಮಕಾರಿ: ಡಾ.ಸಾಹೇಬ ಅಲಿ ನಿರಗುಡಿ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಕಲಿಕೆಯ ಸಂದರ್ಭದಲ್ಲಿ ಬದಲಾವಣೆ ಮತ್ತು ತಂತ್ರಜ್ಞಾನಕ್ಕೆ ಪೂರಕವಾಗಿ ನೂತನ ಪ್ರಯೋಗಗಳಿಗೆ ಮುಂದಾದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಡಾ.ಸಾಹೇಬ್ ಅಲಿ ಹೆಚ್.ನಿರಗುಡಿ ಅವರು ಅಭಿಪ್ರಾಯಪಟ್ಟರು.
ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಬುಧವಾರ ವಿ.ಎಸ್.ಕೆ. ಯೂನಿವರ್ಸಿಟಿ ವಾಲಿಬಾಲ್ ಪ್ರೀಮಿಯರ್ ಲೀಗ್ ಸೀಸನ್-1 ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಆಟ ಪಾಠಗಳ ಮೂಲಕ ದೈಹಿಕ ಶಿಕ್ಷಣದ ವಿದ್ಯಾರ್ಥಿಗಳು ಸದಾ ಕ್ರಿಯಾಶೀಲವಾಗಿದ್ದು, ವಿಶ್ವವಿದ್ಯಾಲಯದ ಮೆರಗನ್ನು ಹೆಚ್ಚಿಸಿದ್ದಾರೆ ಎಂದರು.
ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಮಾಜಿ ವಾಲಿಬಾಲ್ ಕ್ರೀಡಾಪಟು ಡಾ.ಪ್ರವೀಣ್ ಸಿಂಗ್ ಅವರು ವಿಶೇಷ ಆಹ್ವಾನಿತಾರಾಗಿ ಭಾಗವಹಿಸಿ ಮಾತನಾಡಿ, ಯಾವುದೇ ಕ್ರೀಡೆಯಲ್ಲಿ ಯಶಸ್ಸು ಗಳಿಸಲು ಸತತ ಸಾಧನೆ ಮತ್ತು ಶ್ರಮ ಹೆಚ್ಚಿರುವುದರ ಜೊತೆಗೆ ಫ್ಯಾಷನ್ ಮತ್ತು ವಿಜ್ಞಾನ, ಪ್ರೀತಿ ಕಾರಣವಾಗುತ್ತದೆ ಎಂದರು.
ಡಾ.ಶಶಿಧರ್ ಕೆಲ್ಲೂರ್ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ.ಸಂಪತ್ ಕುಮಾರ್, ಶಿವರಾಮ ರಾಗಿ, ಮಹೇಶಬಾಬು, ಪಾಪಯ್ಯ, ಕ್ರೀಡಾಪಟುಗಳು ಹಾಗೂ ಇತರರು ಉಪಸ್ಥಿತರಿದ್ದರು.
------
ಬಳ್ಳಾರಿ: ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ನಗರದ ಕಂಟೋನ್‍ಮೆಂಟ್‍ನ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಕ್ವೆಸ್ಟ್ ಗ್ಲೋಬಲ್ ಕಂಪನಿಯ ವತಿಯಿಂದ 2022-23ನೇ ಸಾಲಿನಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕ್ವೆಸ್ಟ್ ಗ್ಲೋಬಲ್ ಕಂಪನಿಯ ಟ್ರಸ್ಟಿ ರೀತೇಶ್ ಅವರು ಮಕ್ಕಳನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿ ಯಶಸ್ಸು ಗಳಿಸುವ ಮೂಲಕ ಸಮಾಜಕ್ಕೆ ಒಂದು ಒಳ್ಳೆಯ ಕೊಡುಗೆ ನೀಡಬೇಕೆಂದು ಹೇಳಿದರು.
ಶಾಲೆಯ ಪ್ರಾಚಾರ್ಯ ಕೆ.ಜಿ.ನಾಗರಾಜ ಅವರು ಮಾತನಾಡಿ, ನಮ್ಮ ದೇಶವು ಪ್ರತಿಯೊಂದು ಕ್ಷೇತ್ರದಲ್ಲಿಯೂ ಪ್ರಥಮ ಸ್ಥಾನವನ್ನು ಹೊಂದಿದೆ. ಚಂದ್ರಯಾನ-3 ಯಶಸ್ವಿಯಾಗಲು ಸುಮಾರು 50-60 ವಿಜ್ಞಾನಿಗಳು ಸುಮಾರು 4 ವರ್ಷಗಳವರೆಗೆ ಶ್ರಮಿಸಿದ್ದಾರೆ. ಅದರಂತೆ ನಮ್ಮ ತಾಂತ್ರಿಕ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಾದ ನೀವು ಮುಂದೆ ಉತ್ತಮ ತಾಂತ್ರಿಕ ಶಿಕ್ಷಣವನ್ನು ಪಡೆದು ಜೀವನದಲ್ಲಿ ಉನ್ನತ ಸ್ಥಾನ ಅಲಂಕರಿಸಬೇಕೆಂದು ಹಾಗೂ ಇದನ್ನು ಸಾಧಿಸಲು ಏಕಾಗ್ರತೆಯಿಂದ ಅಭ್ಯಸಿಸಬೇಕೆಂದು ಹೇಳಿದರು.
ನಂತರದಲ್ಲಿ ವಿದ್ಯಾರ್ಥಿಗಳಿಗೆ ಒಟ್ಟು ರೂ.1ಲಕ್ಷ ಬಹುಮಾನದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ ರೂ.25 ಸಾವಿರ, ದ್ವಿತೀಯ ಬಹುಮಾನ ರೂ.15 ಸಾವಿರ ಮತ್ತು ತೃತೀಯ ಬಹುಮಾನ ರೂ.10 ಸಾವಿರ ಹಾಗೂ 9ನೇ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ತಲಾ ಪ್ರಥಮ ಬಹುಮಾನ ರೂ.12 ಸಾವಿರ, ದ್ವಿತೀಯ ಬಹುಮಾನ ರೂ.8 ಸಾವಿರ ಮತ್ತು ತೃತೀಯ ಬಹುಮಾನ ರೂ.5 ಸಾವಿರ ನಗದು ಬಹುಮಾನವಾಗಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಗೋಪಿ.ಜಿ, ಶಿವಯೋಗೆಪ್ಪ ಮತ್ತಿಕಟ್ಟಿ, ವಿಜಯಕುಮಾರ್, ಶಾಲೆಯ ಎಲ್ಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
------
ಆಯುಷ್ಮಾನ್ ಭವಃ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಸಾರ್ವಜನಿಕರು ಆಸ್ಪತ್ರೆಗೆ ಭೇಟಿ ನೀಡಿದಾಗ ನಮ್ಮ ಆಸ್ಪತ್ರೆ ಎಂಬ ಭಾವನೆ ಇರಲಿ: ಡಿಹೆಚ್‍ಒ ಡಾ.ವೈ ರಮೇಶ ಬಾಬು
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಸಾರ್ವಜನಿಕರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಇದು ನಮ್ಮ ಆಸ್ಪತ್ರೆ ಎಂಬ ಭಾವನೆಯೊಂದಿಗೆ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಮಾತ್ರ ಶುಚಿತ್ವಕ್ಕೆ ಮಹತ್ವ ನೀಡಿದಂತಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶ್ ಬಾಬು ಅವರು ಹೇಳಿದರು.
ಆಯುಷ್ಮಾನ್ ಭವಃ ಅಭಿಯಾನದ ವಿವಿಧ ಕಾರ್ಯಕ್ರಮದಡಿಯಲ್ಲಿ ರಾಷ್ಟ್ರದಾದ್ಯಂತ ಜರುಗುತ್ತಿರುವ ಎಲ್ಲ ಆಸ್ಪತ್ರೆಗಳ ಸ್ವಚ್ಛತಾ ಅಭಿಯಾನದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ “ಸ್ವಚ್ಛ ಆಸ್ಪತ್ರೆ-ನಮ್ಮ ಆದ್ಯತೆ” ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯದಲ್ಲಿ ಅವರು ಹೇಳಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಪ್ರತಿದಿನ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರಿಗೆ ಶುಚಿತ್ವದ ಮಹತ್ವ ತಿಳಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಬಳ್ಳಾರಿ ಜಿಲ್ಲಾ ಆಸ್ಪತ್ರೆಯು ಸ್ವಚ್ಛತೆ ಮತ್ತು ಗುಣಮಟ್ಟದ ಆರೋಗ್ಯ ಸೇವೆ ನೀಡುವಲ್ಲಿ ರಾಷ್ಟ್ರಮಟ್ಟದ ಕಾಯಕಲ್ಪ ಪ್ರಶಸ್ತಿ ಪಡೆದಿದೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಸ್ಪತ್ರೆಗೆ ಆಗಮಿಸುವ ಸಂದರ್ಭದಲ್ಲಿ ಶುಚಿತ್ವವು ಸಹ ಒಂದು ಸವಾಲು ಆಗಿ ಪರಿಣಮಿಸುತ್ತದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ತಾವು ಸಹ ಕಿಟಕಿಯ ಹತ್ತಿರ ಉಗುಳುವುದಾಗಲಿ ಅಥವಾ ಹೊರ ಆವರಣದಲ್ಲಿ ಆಹಾರ ಪಾರ್ಸೆಲ್ ಕವರ್, ಚಹಾ ಕಫ್, ಎಳೆನೀರಿನ ಚಿಪ್ಪುಗಳನ್ನು ಅಲ್ಲಲ್ಲಿ ಬಿಸಾಡದೇ, ನಿಗದಿಪಡಿಸಿದ ಸ್ಥಳ ಅಥವಾ ಕಸದ ಡಬ್ಬಿಗಳಲ್ಲಿ ಹಾಕಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸ್ಥಾನಿಕ ವೈದ್ಯಾಧಿಕಾರಿ ಡಾ.ಗುರುನಾಥ್ ಬಿ ಚೌವ್ಹಾಣ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಶುಶ್ರೂಷಣಾಧಿಕಾರಿ ಸೇಲೀನಾ, ಆಡಳಿತ ಅಧಿಕಾರಿಗಳಾದ ದೇಸಾಯಿ, ಮೆಹಬೂಬ್ ಖಾನ್ ಸೇರಿದಂತೆ ತಜ್ಞವೈದ್ಯರು, ಸಿಬ್ಬಂದಿಯವರು ಉಪಸ್ಥಿತರಿದ್ದರು.
ನಂತರದಲ್ಲಿ ಜಿಲ್ಲಾ ಅಸ್ಪತ್ರೆ ಆವರಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣವನ್ನು ಸ್ವಚ್ಛಗೊಳಿಸಲಾಯಿತು.
-----
ಜಿಲ್ಲೆಯಾದ್ಯಂತ ಅ.01ರಂದು ‘ಬೃಹತ್ ಸ್ವಚ್ಛತಾ ಅಭಿಯಾನ’: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕು, ಗ್ರಾಮ ಪಂಚಾಯತಿ ಹಾಗೂ ಗ್ರಾಮಗಳಲ್ಲಿ ಸಂಪೂರ್ಣ ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅ.01ರಂದು “ಬೃಹತ್ ಸ್ಚಚ್ಛತಾ ಅಭಿಯಾನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.
ಅ.02ರಂದು ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ ‘ಸ್ವಚ್ಛ ಭಾರತ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಅವರ ಧ್ಯೇಯವಾಕ್ಯ ‘ಸ್ವಚ್ಛತೆಯೇ ದೈವತ್ವ' ಎಂಬ ಕನಸನ್ನು ನನಸಾಗಿಸಲು ಸೆ.15ರಿಂದ ಅ.02ರವರೆಗೆ 15 ದಿನಗಳ ಕಾಲ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಇವರು ತಿಳಿಸಿದ್ದಾರೆ.
ಆದ್ದರಿಂದ ಅ.01ರಂದು “ಬೃಹತ್ ಸ್ವಚ್ಛತಾ ಅಭಿಯಾನ” ಕಾರ್ಯಕ್ರಮವನ್ನು ಆಯಾ ಗ್ರಾಮ ಪಂಚಾಯತಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಸ್ವಚ್ಛಗಾಹಿಗಳು, ಸ್ವ-ಸಹಾಯ ಗುಂಪುಗಳು, ಎನ್.ಎಸ್.ಎಸ್, ಎನ್.ಸಿ.ಸಿ.ಕ್ರೆಡೆಟ್‍ಗಳು, ನೆಹರು ಕೇಂದ್ರ ಸ್ವಯಂ ಸೇವಕರು, ಮಾರುಕಟ್ಟೆ ಸಂಘಟನೆಗಳು ಹಾಗೂ ಸಾರ್ವಜನಿಕರು ಒಗ್ಗೂಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದ್ದಾರೆ.
ಇದರಲ್ಲಿ ನ್ಯೂನತೆಗಳು ಹಾಗೂ ಬೇಜವಾಬ್ದಾರಿತನ ತೋರಿಸಿದಲ್ಲಿ ಸಂಬಂಧಿಸಿದ ಇಲಾಖಾ ಮುಖ್ಯಸ್ಥರು ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಮವಹಿಸಲಾಗುವುದು ಎಂದೂ ತಿಳಿಸಿದ್ದಾರೆ.
*ಶ್ರಮದಾನ ಹಮ್ಮಿಕೊಳ್ಳುವ ಸ್ಥಳಗಳು:*
ಗ್ರಾಮ ಪಂಚಾಯತಿ ವ್ಯಾಪ್ತಿಯ ನೀರಿನ ಮೂಲಗಳ ಸುತ್ತ-ಮುತ್ತಲು, ಬಸ್ ನಿಲ್ದಾಣ ಮತ್ತು ಕಲ್ಯಾಣಿಗಳ ಸ್ವಚ್ಛತೆ. ಶಿಕ್ಷಣ ಇಲಾಖೆ ವ್ಯಾಪ್ತಿಯ ಶಾಲಾ ಆವರಣ ಸ್ವಚ್ಛತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಂಗನವಾಡಿ ಆವರಣ ಸ್ವಚ್ಛತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ಆಸ್ಪತ್ರೆಗಳ ಆವರಣ ಸ್ವಚ್ಛತೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ವಸತಿ ನಿಲಯಗಳ ಆವರಣ ಸ್ವಚ್ಛತೆ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ವಸತಿ ನಿಲಯಗಳ ಆವರಣ ಸ್ವಚ್ಛತೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಸಂಜೀವಿನಿ ಒಕ್ಕೂಟದಡಿ ದೇವಸ್ಥಾನ ಮತ್ತು ಇತರೆ ಸಾರ್ವಜನಿಕ ಸ್ಥಳಗಳು.
------
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ: ಐದು ದಿನಗಳ ಕಾರ್ಯಾಗಾರ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “ರಿಸರ್ಚ್ ಮೆಥೋಡೊಲಾಜಿ, ರಿಸರ್ಚ್ ಪಬ್ಲಿಕೇಷನ್ಸ್ ಅಂಡ್ ಎಥಿಕ್ಸ್” “Research Methodology, Research Publications and Ethics)” ಎಂಬ ವಿಷಯದ ಕುರಿತು ಅ.03 ರಿಂದ 07ರವರೆಗೆ ಐದು ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ಅವರು ತಿಳಿಸಿದ್ದಾರೆ.
ಕಾರ್ಯಾಗಾರವನ್ನು ಅಕಾಡೆಮಿ ಕಚೇರಿಯಲ್ಲಿ (ಪೆÇ್ರ.ಯು.ಆರ್.ರಾವ್ ವಿಜ್ಞಾನ ಭವನ, ಮೇ.ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ಇಲ್ಲಿ ಆಯೋಜಿಸಿದೆ.
ಕಾರ್ಯಾಗಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಈ ಕಾರ್ಯಾಗಾರವು ಸ್ನಾತಕೋತ್ತರ ವಿದ್ಯಾರ್ಥಿಗಳು ಅಧ್ಯಾಪಕರು ಹಾಗೂ ಯುವ ಸಂಶೋಧಕರಿಗೆ ಉಪಯುಕ್ತವಾಗಲಿದೆ. ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಭಾಗವಹಿಸಬಹುದು.
ಯುವ ಸಂಶೋಧನಾ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಲಿಚ್ಚಿಸುವವರು ಸೆ.30ರೊಳಗಾಗಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ http://www.kstacademy.in ಅಥವಾ ವೈಜ್ಞಾನಿಕಾಧಿಕಾರಿಯಾದ ವಿ.ಕೆ.ಶ್ರೀನಿವಾಸು ಅವರ ಮೊ.9620767819 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ವಿಶೇಷ ಕಾರ್ಯಕ್ರಮಗಳ ಆಯೋಜನೆ ‘ಪ್ರತಿಬಿಂಬ’ ವಿನೂತನ ಕಾರ್ಯಕ್ರಮದಡಿ ಪುಸ್ತಕ ಕಿಟ್ ವಿತರಣೆ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ 2023-24ನೇ ಶೈಕ್ಷಣಿಕ ವರ್ಷಕ್ಕೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಹಲವಾರು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡು, ಜಿಲ್ಲೆಯನ್ನು ಮುಂಚೂಣಿಯಲ್ಲಿರಿಸಲು ವಿಶೇಷ ಆಸಕ್ತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಎಂದು ಶಿಕ್ಷಕರಿಗೆ ನಿರ್ದೇಶನ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಜಾನರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಅತಿಥಿ ಶಿಕ್ಷಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬಳ್ಳಾರಿ ಜಿಲ್ಲೆಯು ಗಡಿನಾಡು ಪ್ರದೇಶವಾಗಿದ್ದು, ಅಧಿಕ ಖನಿಜ ಸಂಪನ್ಮೂಲಗಳಿಂದ ಕೂಡಿದೆ. ಜಿಲ್ಲೆಯಲ್ಲಿ ಡಿಎಂಎಫ್, ಸಿಎಸ್‍ಆರ್ ಅನುದಾನ ಹಾಗೂ ವಿಭಾಗ ಮಟ್ಟದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನ ಬರುತ್ತಿದ್ದು, ಜಿಲ್ಲೆಯ ಮಕ್ಕಳು ಉತ್ತಮ ಕಲಿಕೆಯೊಂದಿಗೆ ಜ್ಞಾನದ ಗಣಿಯಾಗಿ ಹೊರಹೊಮ್ಮಿಸಿ ಜಿಲ್ಲೆಯನ್ನು ವಿದ್ಯಾಕೇಂದ್ರವನ್ನಾಗಿ ಮಾಡಬೇಕು ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
*ಪ್ರತಿಬಿಂಬ:*
ಪ್ರತಿಬಿಂಬ ಎಂಬ ನೂತನ ಕಾರ್ಯಕ್ರಮ ಜಾರಿ ಮಾಡಿ, ಪ್ರತಿ ತಿಂಗಳಿಗೆ ಎರಡು ಬಾರಿ ಘಟಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಹಾಗೂ ಘಟಕ ಪರೀಕ್ಷೆ ಮುಗಿದ 03 ದಿನದೊಳಗಾಗಿ ಮಕ್ಕಳು ಪಡೆದ ಅಂಕಗಳನ್ನು ಆನ್‍ಲೈನ್ ದತ್ತಾಂಶದಲ್ಲಿ ದಾಖಲು ಮಾಡಬೇಕು. ನಂತರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 14,101 ಮಕ್ಕಳಿಗೆ ಪ್ರತಿಬಿಂಬ ಯೋಜನೆಯಡಿ ಆರು(06) ವಿಷಯಗಳನ್ನು ಒಳಗೊಂಡ ಅಭ್ಯಾಸ ಪುಸ್ತಕಗಳ ಕಿಟ್‍ಗಳನ್ನು ಸಿಎಸ್‍ಆರ್ ಯೋಜನೆಯಡಿ ಸಂಡೂರಿನ ಕುಮಾರಸ್ವಾಮಿ ಮಿನರಲ್ ಮೈನ್ಸ್ ಕಂಪನಿಯಿಂದ ಮುದ್ರಿಸಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹನುಮಕ್ಕ ಅವರು ಮಾತನಾಡಿ, ಜಿಲ್ಲೆ ಎಲ್ಲಾ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ತರಬೇತಿ ನುರಿತ ಸಂಪನ್ಮೂಲ ಶಿಕ್ಷಕರಿಂದ ಕಾರ್ಯಾಗಾರ ನೀಡಲಾಗುತ್ತಿದೆ. ಜೊತೆಗೆ ಪ್ರತಿ ತಿಂಗಳು ಮೊದಲನೇ ಮತ್ತು ಮೂರನೇ ಶನಿವಾರದಂದು ಆನ್‍ಲೈನ್ ಮೂಲಕ ತರಬೇತಿಯನ್ನು ನೀಡಲು ಸಹಾ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದು ತಿಳಿಸಿದರು.
ಫಲಿತಾಂಶ ಸುಧಾರಣೆಗಾಗಿ ನಕಲು ಮುಕ್ತ ಮತ್ತು ಪಾರದರ್ಶಕ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದು, ಶೈಕ್ಷಣಿಕವಾಗಿ ಜಿಲ್ಲೆಯನ್ನು ಮುನ್ನಲೆಗೆ ತರಲು ಎಲ್ಲಾ ಕಾರ್ಯಕ್ರಮಗಳನ್ನು ಅನುಪಾಲನೆ ಮಾಡಿ, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಬಳ್ಳಾರಿ ಪೂರ್ವ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಯಿಮುರ್ ರೆಹಮಾನ್, ಜಿಲ್ಲಾ ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿ ಎ.ಕೆ.ಸತ್ಯನಾರಾಯಣ, ವಿಷಯ ಪರಿವೀಕ್ಷಕ(ಸಮಾಜ ವಿಜ್ಞಾನ) ಎಚ್.ವೀರೇಶಪ್ಪ, ವಿಷಯ ಪರಿವೀಕ್ಷಕ (ಗಣಿತ) ಎಂ.ಬಸವರಾಜ, ಉರ್ದು ಶಿಕ್ಷಣ ಸಂಯೋಜಕ ಮೋಯಿನುದ್ದೇನ್, ಸಂತ ಜಾನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಾಂತ ಶೀಲನ್ ಹಾಗೂ 306 ಜನ ಅತಿಥಿ ಶಿಕ್ಷಕರು ಮತ್ತು ಪ್ರತಿ ವಿಷಯದ ಸಂಪನ್ಮೂಲ ಶಿಕ್ಷಕರು ಭಾಗವಹಿಸಿದ್ದರು.
---------
ಬಳ್ಳಾರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಪ್ರತಿಯೊಬ್ಬರೂ ಸ್ವಚ್ಛತೆ ಕಾರ್ಯ ಕೈಗೊಳ್ಳಲು ನ್ಯಾ.ಪುಷ್ಪಾಂಜಲಿ ದೇವಿ ಕರೆ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಬಳ್ಳಾರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಬುಧವಾರ ಸ್ವಚ್ಛತಾ ಕಾರ್ಯ ನಡೆಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್. ಪುಷ್ಪಾಂಜಲಿ ದೇವಿ ಅವರು ಮಾತನಾಡಿ, ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಎಲ್ಲರೂ ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.
ರಾಷ್ಟ್ರೀಯ ಸ್ವಚ್ಛತಾ ಸಪ್ತಾಹವು ಸೆ.25ರಿಂದ ಅ.02ರವರೆಗೆ ನಡೆಯುತ್ತಿದ್ದು, ಯಾವುದೇ ಭೇದ-ಬಾವವಿಲ್ಲದೇ ಪ್ರತಿಯೊಬ್ಬರೂ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಿನಯ್.ಡಿ, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ, ಪ್ರಿನ್ಸಿಪಲ್ ಹಿರಿಯ ಶ್ರೇಣಿ ಹಾಗೂ ಸಿಜೆಎಂ ನ್ಯಾಯಾಧೀಶರಾದ ಸತೀಶ್ ಜೆ.ಬಾಳಿ, ಪ್ರಿನ್ಸಿಪಲ್ ಕಿರಿಯ ಶ್ರೇಣಿ ಹಾಗೂ ಸಿಜೆಎಂ ನ್ಯಾಯಾಧೀಶರಾದ ಅಮೀತ್ ಘಟ್ಟಿ, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ವಿಮಲ್ ಆರ್.ನಂದಾಗಾಂವ್, ಪ್ರಿನ್ಸಿಪಲ್ ಕೌಟುಂಬಿಕ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ, 5ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್, 1ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಈರಪ್ಪ ದವಳೇಶ್ವರ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)















































