ಶುಕ್ರವಾರ, ಸೆಪ್ಟೆಂಬರ್ 29, 2023

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ.01ರಂದು

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಧೆಗಳ ಇವರ ಸಂಯುಕ್ತಾಶ್ರಯದಲ್ಲಿ ಅ.01ರಂದು ಬೆಳಿಗ್ಗೆ 10.30ಕ್ಕೆ ನಗರದ ಪಾರ್ವತಿ ನಗರದಲ್ಲಿ ಪೆÇಲೀಸ್ ಜಿಮ್‍ಖಾನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರೆ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಹೊಸಮನೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ.ಎನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕ ವಿಜಯಕುಮಾರ್ ಕೆ.ಹೆಚ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಸನ್ಮಾನ, ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಫರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಅತಿಥಿಗಳಿಂದ ಬಹುಮಾನ ವಿತರಣೆ ಮಾಡಲಾಗುವುದು. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ