ಶುಕ್ರವಾರ, ಸೆಪ್ಟೆಂಬರ್ 29, 2023

ಕಲಬುರ್ಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ ಅ.05ರಂದು

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಕಲಬುರ್ಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಅಕ್ಟೋಬರ್ 05ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ. *ಕ್ರೀಡೆಗಳು:* ಫುಟ್ಬಾಲ್, ಹಾಕಿ, ನೆಟ್ ಬಾಲ್, ಬಾಸ್ಕೆಟ್ ಬಾಲ್, ವೇಟ್‍ಲಿಫ್ಟಿಂಗ್ ಮತ್ತು ಯೋಗ. *ನಿಬಂಧನೆಗಳು:* ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ, ಆಕ್ಷೇಪಣೆ ಯಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ನಿಯಮಾನುಸಾರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳಿಗೆ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರತ್ತಾರೆ. ಹೊರ ರಾಜ್ಯದ ಕ್ರೀಡಾಪಟುಗಳ ಪ್ರಕರಣಗಳು ಬಂದಲ್ಲಿ ಆಧಾರ್ ಕಾರ್ಡ್ ಕಡ್ಡಾಯವಾಗಿ ಸಲ್ಲಿಸÀಬೇಕು. ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ, ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರರಲ್ಲ. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಎಂ.ಜಾಕೀರ್ ಅವರ ಮೊ.9036335986 ಹಾಗೂ ಜಿ.ರವಿ ಅವರ ಮೊ.9739852460 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ