ಬುಧವಾರ, ಸೆಪ್ಟೆಂಬರ್ 13, 2023
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪ್ರಸ್ತಾವನೆಯ ವಾಚನ ಸೆ.15ರಂದು
ಬಳ್ಳಾರಿ,ಸೆ.13(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆ.15 ರಂದು ಬೆಳಿಗ್ಗೆ 10ಕ್ಕೆ ನಗರದ ವಿಮ್ಸ್ ಮೈದಾನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪ್ರಸ್ತಾವನೆಯ ವಾಚನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟನೆ ಮತ್ತು ಸಂವಿಧಾನದ ಪ್ರಸ್ತಾವನೆಯ ಬೋಧನೆ ಮಾಡುವರು.
ಸಮಾಜ ಕಲ್ಯಾಣ ಇಲಾಖಾ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಘನ ಉಪಸ್ಥಿತಿ ಇರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರೆ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಸತೀಶ್.ಕೆ.ಹೆಚ್ ಅವರು ಉಪಸ್ಥಿತರಿರಲಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ