ಶುಕ್ರವಾರ, ಸೆಪ್ಟೆಂಬರ್ 15, 2023
ಕಂಪ್ಲಿಯ ನಂ.15ಗೋನಾಳ ಗ್ರಾಮದಲ್ಲಿ ಸಾರ್ವಜನಿಕ ಗಣೇಶ ಹಬ್ಬ ಆಚರಣೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ಸೆ.15(ಕರ್ನಾಟಕ ವಾರ್ತೆ):
ಜಿಲ್ಲೆಯ ಕಂಪ್ಲಿ ತಾಲೂಕು ವ್ಯಾಪ್ತಿಯಲ್ಲಿ ಬರುವ ನಂ.15 ಗೋನಾಳ ಗ್ರಾಮದಲ್ಲಿ ಸಾರ್ವಜನಿಕ ಗಣೇಶ ಹಬ್ಬ ಆಚರಿಸುವ ಸಂದರ್ಭದಲ್ಲಿ ಜನಾಂಗೀಯ ವೈಶಮ್ಯವಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ನಂ.15 ಗೋನಾಳ ಗ್ರಾಮದಲ್ಲಿ ಪ್ರಸ್ತಕ ಸಾಲಿಗೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು ಹಾಗೂ ಯಾವುದೇ ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸುವುದು, ಜನಸಂದಣಿ ಉಂಟಾಗುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ