ಬುಧವಾರ, ಸೆಪ್ಟೆಂಬರ್ 13, 2023

ಸಂಡೂರು: ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.17ರಂದು

ಬಳ್ಳಾರಿ,ಸೆ.13(ಕರ್ನಾಟಕ ವಾರ್ತೆ): ಸಂಡೂರು ತಾಲೂಕಿನಲ್ಲಿ 2023-24ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಸೆ.17ರಂದು ಬೆಳಿಗ್ಗೆ 10.30ಕ್ಕೆ ಸಂಡೂರು ಪಟ್ಟಣದ ಎಸ್.ಆರ್.ಎಸ್ ಮೈದಾನದಲ್ಲಿ ಸಂಘಟಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ. ಕ್ರೀಡಾಕೂಟದಲ್ಲಿ ಆಯಾ ತಾಲ್ಲೂಕಿನ ಪುರಷ ಮತ್ತು ಮಹಿಳಾ ಕ್ರೀಡಾಪಟುಗಳು ಭಾಗವಹಿಸಬಹುದು. ಇದರಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್ (ಪುರಷರಿಗೆ ಮಾತ್ರ), ಥ್ರೋಬಾಲ್, ಯೋಗ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳಾಗಿವೆ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ, ಆಕ್ಷೇಪಣೆ ಯಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ನಿಯಮಾನುಸಾರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳಿಗೆ ಮಾತ್ರ ಅರ್ಹರು ಇರುತ್ತದೆ. ಅಂತಹ ಪ್ರಕರಣಗಳು ಬಂದಲ್ಲಿ ಆಧಾರ್‍ಕಾರ್ಡ್ ಕಡ್ಡಾಯವಾಗಿ ಸಲ್ಲಿಸಬೇಕು. ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ, ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರರಲ್ಲ. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಬತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಡೂರು ದೈಹಿಕ ಶಿಕ್ಷಣ ಪರೀವೀಕ್ಷಕರ ಮೊ.9480695072 ಹಾಗೂ ಅಥ್ಲೆಟಿಕ್ ತರಬೇತುದಾರರಾದ ರೋಹಿಣಿ ಅವರ ಮೊ.8217324522 ಇವರಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ