ಬುಧವಾರ, ಸೆಪ್ಟೆಂಬರ್ 13, 2023

ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಸೆ.17ರಂದು

ಬಳ್ಳಾರಿ,ಸೆ.13(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆ.17 ರಂದು ಮಧ್ಯಾಹ್ನ 12 ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಸೆ.17ರಂದು ಬೆಳಿಗ್ಗೆ 09ಕ್ಕೆ ನಗರದ ಕಾಳಮ್ಮ ಬೀದಿಯ ಶ್ರೀ ಕಾಳಿಕಾ ಕಮಠೇಶ್ವರ ದೇವಸ್ಥಾನದ ಮುಂಭಾಗ ಶ್ರೀ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 12ಕ್ಕೆ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರೆ ಡಿ.ತ್ರಿವೇಣಿ ಹಾಗೂ ಉಪಮಹಾಪೌರರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಧಾರವಾಡ ನಿವೃತ್ತ ಜಿಲ್ಲಾ ವಾರ್ತಾಧಿಕಾರಿ ಸಿ.ಪಿ.ಮಾಯಾಚಾರಿ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಜಿಲ್ಲಾ ವಿಶ್ವಕರ್ಮ ವಿಕಾಸ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ಸದಾಶಿವ ಸೋನಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿರಲಿದ್ದಾರೆ. ಜಯಂತಿಯ ಮೆರವಣಿಗೆ ಮಾರ್ಗ: ಶ್ರೀ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಆರಂಬವಾಗಿ ಬೆಂಗಳೂರು ರಸ್ತೆಯ ಹಳೇ ಬ್ರೂಸ್‍ಪೇಟೆ ಪೆÇಲೀಸ್ ಠಾಣೆ ಮುಂಭಾಗದಿಂದ ಹೆಚ್.ಆರ್ ಗವಿಯಪ್ಪ ವೃತ್ತ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಪುಟ್ ಬಾಲ್ ಮೈದಾನದ ಸಭಾಂಗಣದವರೆಗೆ ನಡೆಯಲಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ