ಶುಕ್ರವಾರ, ಸೆಪ್ಟೆಂಬರ್ 15, 2023

ಶ್ರೀ ಗಣೇಶ ಶ್ರೀನಿವಾಸ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸೆ.18ರಂದು

ಬಳ್ಳಾರಿ.ಸೆ.15(ಕರ್ನಾಟಕ ವಾರ್ತೆ): ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಡಿಯ ನಗರದ ಗೌಳೇರಹಟ್ಟಿಯ ಶ್ರೀ ಗಣೇಶ ಶ್ರೀನಿವಾಸ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಸೆ.18ರಂದು ನಡೆಯಲಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಾಹಕಾಧಿಕಾರಿ ಅವರು ತಿಳಿಸಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ಅಂದು ದೇವಸ್ಥಾನದಲ್ಲಿ ಪ್ರಸಾದ ವ್ಯವಸ್ಥೆ ಇರುತ್ತದೆ. ಆದ್ದರಿಂದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ