ಬುಧವಾರ, ಸೆಪ್ಟೆಂಬರ್ 20, 2023

ಸೆ.25ರಂದು ಸಂಡೂರು ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

ಬಳ್ಳಾರಿ,ಸೆ.20(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ಸೆ.25ರಂದು ಬೆಳಿಗ್ಗೆ 11ಕ್ಕೆ ತಾಪಂ ಆಡಳಿತಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್‍ನ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಎಂ.ವೈ.ಘೋರ್ಪಡೆ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಡೂರು ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಾಹಕಾಧಿಕಾರಿ ಅವರು ತಿಳಿಸಿದ್ದಾರೆ. ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು ಹಾಗೂ 26 ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ