ಶುಕ್ರವಾರ, ಸೆಪ್ಟೆಂಬರ್ 22, 2023
ಕುರುಗೋಡು: ತಾಪಂ ಕೆಡಿಪಿ ಸಭೆ ಸೆ.25ರಂದು
ಬಳ್ಳಾರಿ,ಸೆ.22(ಕರ್ನಾಟಕ ವಾರ್ತೆ):
ಕುರುಗೋಡು ತಾಲೂಕಿನ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ಸೆ.25ರಂದು ಮಧ್ಯಾಹ್ನ 02 ಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಸಭೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಕುರುಗೋಡು ತಾಲೂಕು ಪಂಚಾಯತಿ ಕಾರ್ಯನಿರ್ವಾಕಾಧಿಕಾರಿ ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ