ಬುಧವಾರ, ಸೆಪ್ಟೆಂಬರ್ 27, 2023

ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಸೆ.29ರಂದು

ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ರೇಬಿಸ್ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು ನಗರದ ಜಿಲ್ಲಾಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆವರಣದಿಂದ ಸೆ.29ರಂದು ಬೆಳಿಗ್ಗೆ 09ಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಅವರು ತಿಳಿಸಿದ್ದಾರೆ. *ಜಾಥಾ ಮಾರ್ಗ:* ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಸಂಗಮ್ ವೃತ್ತ, ರಾಘವೇಂದ್ರ ಚಿತ್ರ ಮಂದಿರ ವೃತ್ತ, ಮೀನಾಕ್ಷಿ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮರಳಿ, ಗಡಿಗಿ ಚೆನ್ನಪ್ಪ ವೃತ್ತ ಮೂಲಕ ಜಿಲ್ಲಾಸ್ಪತ್ರೆ ಆವರಣಕ್ಕೆ ಮುಕ್ತಾಯಗೊಳ್ಳಲಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ