ಮಂಗಳವಾರ, ಸೆಪ್ಟೆಂಬರ್ 26, 2023

ಜಿಲ್ಲೆಯಲ್ಲಿ ಜಾನುವಾರು ರೋಗಗಳಿಗೆ 4ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಚಾಲನೆ ಜಾನುವಾರುಗಳ ರಕ್ಷಣೆ ಅಗತ್ಯ: ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ): ಜಾನುವಾರುಗಳು ನಮ್ಮ ರೈತರ ಬೆನ್ನೆಲುಬು ಆಗಿದ್ದು, ಅವುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೇಂದ್ರ ಪುರಸ್ಕøತ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜಾನುವಾರು ರೋಗಗಳಿಗೆ 4 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಜಿಲ್ಲಾ ಪಶು ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಜಾನುವಾರುಗಳಿಗೆ ತಾಯಿ ಸ್ಥಾನವನ್ನು ನೀಡಲಾಗಿದೆ. ರೈತರ ಬೆನ್ನೆಲುಬು ಆಗಿ ಅವುಗಳು ದುಡಿಯುತ್ತಿವೆ. ಆದರೆ ಕಾಲುಬಾಯಿ ರೋಗವು ಜಾನುವಾರುಗಳಲ್ಲಿ ಬಹಳ ದೊಡ್ಡ ಸಮಸ್ಯೆಯಾಗಿದೆ. ವಿಶೇಷವಾಗಿ ಇದು ವೈರಸ್‍ನಿಂದ ಬರುವ ಕಾಯಿಲೆಯಾಗಿದೆ. ಈ ಕಾಯಿಲೆ ಒಂದರೆಡು ದಿನಗಳಲ್ಲಿ ವಾಸಿಯಾಗುವಂತಹದ್ದಲ್ಲ. ಬದಲಾಗಿ ಹಂತ ಹಂತವಾಗಿ ಚಿಕಿತ್ಸೆ ನೀಡಲು ಸರ್ಕಾರವು ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಪ್ರತಿಯೊಬ್ಬ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆ - ಸಂಚಾರಿ ತುರ್ತು ಪಶು ಚಿಕಿತ್ಸಾ ಆಂಬ್ಯುಲೆನ್ಸ್ ವಾಹನಗಳಿಗೆ ಚಾಲನೆ ನೀಡಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಹನುಮಂತ ನಾಯ್ಕ ಕಾರುಬಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸೆ.36ರಿಂದ ಅ.25 ರವರೆಗೆ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮವು 30 ದಿನಗಳ ಅವಧಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆಯಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 1,80,206 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಸೀಳು ಗೊರಸು ಇರುವ ದನ - ಎಮ್ಮೆಗಳಲ್ಲಿ ಕಾಣಿಸಿಕೊಳ್ಳುವ ಕಾಲು ಬಾಯಿ ರೋಗ ಲಸಿಕೆ ವರ್ಷಕ್ಕೆ 2 ಬಾರಿ ಹಾಕಲಾಗುತ್ತಿದೆ ಎಂದು ತಿಳಿಸಿದರು. ಇಲ್ಲಿಯವರೆಗೆ ಎಫ್.ಎಂಡಿ ಸಿಪಿ ಯಲ್ಲಿ 17 ಬಾರಿ ಲಸಿಕೆ ಹಾಕಿದ್ದು, ಓಂಆಅP ಕಾರ್ಯಕ್ರಮದಡಿಯಲ್ಲಿ 4ನೇ ಸುತ್ತಿನ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, 2030 ರ ವರೆಗೆ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. 78 ಇಲಾಖಾ ಲಸಿಕಾ ಸಿಬ್ಬಂದಿ ಹಾಗೂ 32 ಇಲಾಖೇತರ ತರಬೇತಿ ಪಡೆದಿರುವ ಲಸಿಕಾದಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದ ಅವರು, ಜಾನುವಾರುಗಳಿಗೆ ನೀಡುವ ಲಸಿಕೆಯನ್ನು ಶೀತಲ ಸರಪಳಿಯಲ್ಲಿ ಸಂಗ್ರಹಿಸಲಾಗಿದ್ದು, ಲಸಿಕಾ ಅಭಿಯಾನವನ್ನು ಪಲ್ಸ್ ಪೆÇೀಲಿಯೋ ಮಾದರಿಯಲ್ಲಿ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಲಸಿಕೆ ಹಾಕಲಾಗುವುದು ಎಂದರು. ಪಶು ಸಂಜೀವಿನಿ-1962 ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಸೇವೆ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಬಳ್ಳಾರಿ ಜಿಲ್ಲೆಗೆ ಒಟ್ಟು 6 ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನಗಳು ಮಂಜೂರಾಗಿವೆ. ಪ್ರತಿ ತಾಲ್ಲೂಕಿಗೆ ಒಂದರಂತೆ ಹಾಗೂ ಪಾಲಿಕ್ಲಿನಿಕ್‍ನಲ್ಲಿ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನದ ಸೇವೆ ಲಭ್ಯವಿದ್ದು, 1962 ಸಹಾಯವಾಣಿಗೆ ಕರೆ ಮಾಡಿದಲ್ಲಿ ರೈತರ ಮನೆ ಬಾಗಿಲಿಗೆ ತೆರಳಿ ತುರ್ತು ಚಿಕಿತ್ಸೆಯನ್ನು ಒದಗಿಸಲಿದೆ. ವಾಹನದಲ್ಲಿ ಪಶು ವೈದ್ಯರು, ಪಶು ವೈದ್ಯಕೀಯ ಸಹಾಯಕರು/ವಾಹನ ಚಾಲಕರು ಸೇವೆ ನೀಡುತ್ತಾರೆ. 1962 ತುರ್ತು ಚಿಕಿತ್ಸೆ ವಾಹನದಲ್ಲಿ ತುರ್ತು ಔಷಧಗಳು ಮತ್ತು ಇತರ ಮೂಲ ಸೌಕರ್ಯಗಳು ಇರಲಿವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಸುರೇಖಾ, ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ಆರ್.ಶ್ರೀನಿವಾಸ, ಪ್ರಯೋಗಾಲಯದ ತಾಂತ್ರಿಕ ಸಹಾಯಕ ಡಾ.ರಾಜಶೇಖರ್, ಪಶು ಸಖಿಯರು, ಜಿಲ್ಲಾ ಪಶು ವೈದ್ಯಕೀಯ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಗೂ ಇತರರು ಹಾಜರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ