ಭಾನುವಾರ, ಸೆಪ್ಟೆಂಬರ್ 3, 2023
ಬಳ್ಳಾರಿ; ಟಿಇಟಿ ಪರೀಕ್ಷೆ ಬರೆದ 8,458 ವಿದ್ಯಾರ್ಥಿಗಳು
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ (ಮೊದಲ ಅಧಿವೇಶನದಲ್ಲಿ 15, ಎರಡನೇ ಅಧಿವೇಶನದಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ) ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಸುಗಮವಾಗಿ ನಡೆಯಿತು.
ಬೆಳಿಗ್ಗೆ ನಡೆದ ಮೊದಲ ಪತ್ರಿಕೆಯ ಪರೀಕ್ಷೆಗೆ ಒಟ್ಟು 4,038 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದರು. ಇದರಲ್ಲಿ 3,557 ವಿದ್ಯಾರ್ಥಿಗಳು ಹಾಜರಾಗಿದ್ದರು. 481 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಮಧ್ಯಾಹ್ನ 2ರಿಂದ ನಡೆದ ಎರಡನೇ ಪತ್ರಿಕೆಗೆ 5,318 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದರು. ಇದರಲ್ಲಿ 4,901 ವಿದ್ಯಾರ್ಥಿಗಳು ಹಾಜರಾಗಿದ್ದರು. 417 ವಿದ್ಯಾರ್ಥಿಗಳು ಗೈರಾಗಿದ್ದರು.
ಎಲ್ಲ ಪರೀಕ್ಷಾ ಕೇಂದ್ರಗಳ ಬಳಿ ಬಿಗಿ ಪೆÇಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಯಾವುದೇ ರೀತಿಯ ಗೊಂದಲಗಳಿಲ್ಲದೆ ಪರೀಕ್ಷೆಗಳು ನಡೆದಿವೆ ಎಂದು ಡಿಡಿಪಿಐ ಹನುಮಕ್ಕ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ