ಮಂಗಳವಾರ, ಸೆಪ್ಟೆಂಬರ್ 26, 2023
‘ಆಯುμÁ್ಮನ್ ಭವ': ಅಂತ್ಯೋದಯ ರೂಪದಲ್ಲಿ ಆರೋಗ್ಯ ಸೇವೆಗಳ ಒದಗಿಸುವಿಕೆ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ಡಿಸಿ ಮಿಶ್ರಾ ಕರೆ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಸೆ.13 ರಂದು ರಾಷ್ಟ್ರಪತಿಗಳಿಂದ ಚಾಲನೆಗೊಂಡು ಸೆ.17ರಿಂದ ಜಿಲ್ಲೆಯಲ್ಲಿ ಆರಂಭಗೊಂಡ ಅಂತ್ಯೋದಯ ರೂಪದಲ್ಲಿ ಎಲ್ಲಾ ಆರೋಗ್ಯ ಸೇವೆಗಳನ್ನು ಕಡು ಬಡವರಿಗೆ ಮುಟ್ಟಿಸುವ ‘ಆಯುಷ್ಮಾನ್ ಭವ’ ಅಭಿಯಾನ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಜಿಲ್ಲೆಯ 5 ತಾಲೂಕುಗಳಲ್ಲಿ ಮಾರ್ಗಸೂಚಿಯಂತೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಈಗಗಾಲೇ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 680 ಜನ ತಪಾಸಣೆಗೆ ಒಳಪಟ್ಟಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್, ಆಯುಷ್ ಕ್ಲಿನಿಕ್ ಮತ್ತು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಒಟ್ಟು 138 ಆರೋಗ್ಯ ಮೇಳಗಳನ್ನು ಆಯೋಜಿಸಲಾಗಿದೆ. ಒಟ್ಟು 6981 ಜನರು ತಪಾಸಣೆಗೆ ಒಳಪಟ್ಟಿದ್ದು, ಒಟ್ಟಾರೆ 7661 ಜನ ಮೊದಲ ವಾರದಲ್ಲಿ ಶಿಬಿರಗಳಲ್ಲಿ ಭಾಗವಹಿಸಿ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಬಿರದಲ್ಲಿ 6643 ಜನಕ್ಕೆ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ಕೈಗೊಳ್ಳಲಾಗಿದೆ ಮತ್ತು 1134 ಜನರಿಗೆ ಕ್ಷಯರೋಗದ ಪರೀಕ್ಷೆ ಮಾಡಲಾಗಿದೆ. ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದಡಿ 443 ಮಕ್ಕಳಿಗೆ ಲಸಿಕೆಯನ್ನು ಹಾಕಲಾಗಿದೆ. ಶಿಬಿರಗಳಲ್ಲಿ 473 ಆಯುಷ್ಮಾನ ಭಾರತ್ ಕಾರ್ಡ್‍ಗಳನ್ನು ಸೃಜನೆ ಮಾಡಲಾಗಿದೆ ಮತ್ತು 2343 ಜನರಿಗೆ ಆಭಾ ಕಾರ್ಡ್ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಅಭಿಯಾನಡಿಯಲ್ಲಿ 18 ಉಚಿತ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ, 1135 ರಕ್ತ ಯುನಿಟ್ ರಕ್ತ ಸಂಗ್ರಹಿಸಲಾಗಿದೆ. ಒಟ್ಟು ಅಂಗಾಂಗ ದಾನವನ್ನು ಜಿಲ್ಲೆಯಲ್ಲಿ 68 ಜನ ಅಂಗಾಂಗ ದಾನವನ್ನು ಅಧಿಕೃತವಾಗಿ ನೊಂದಣಿ ಮಾಡಿಕೊಂಡಿದ್ದಾರೆ.
ಸಾರ್ವಜನಿಕರು ಪ್ರತಿ ಮಂಗಳವಾರ ಜಿಲ್ಲೆಯ ಎಲ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಮ್ಮ ಕ್ಲಿನಿಕ್ ಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಎಲ್ಲ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ತಪ್ಪದೇ ಎಲ್ಲರೂ ಆಯುμÁ್ಮನ್ ಭಾರತ ಕಾರ್ಡ್‍ಗಳನ್ನು ಮಾಡಿಸುವ ಮೂಲಕ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷದವರೆಗೆ ಹಾಗೂ ಎಪಿಎಲ್ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದವರೆಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸುಸಜ್ಜಿತ ಸರ್ಕಾರಿ ಅಥವಾ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳಬೇಕು. ಕಾರ್ಡ್‍ಗಳನ್ನು ಗ್ರಾಮ್ ಒನ್, ಕರ್ನಾಟಕ ಒನ್, ಬಳ್ಳಾರಿ ಒನ್ ಸೆಂಟರ್‍ಗಳಲ್ಲಿ ಮಾಡಿಸಕೊಳ್ಳಬಹುದಾಗಿದೆ.
ಆಯುಷ್ಮಾನ್ ಭಾರತ ಹೆಲ್ತ್ ಅಕೌಂಟ್ ಮಾಡಿಸುವ ಮೂಲಕ ದೇಶದ ಯಾವುದೇ ಭಾಗದಲ್ಲಿ ಚಿಕಿತ್ಸೆಗೆ ತೆರಳಿದರೂ ಸಹ ಸಕಾಲದಲ್ಲಿ ಚಿಕಿತ್ಸೆಯನ್ನು ನೀಡಲು ಸಹಕಾರಿಯಾಗುತ್ತದೆ. ಅ.02ರವರೆಗೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಇತರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಚತೆಯನ್ನು ಅಭಿಯಾನದ ರೂಪದಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅದೇ ದಿನದಂದು ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಆಯುμÁ್ಮನ್ ಸಭೆ ಹಮ್ಮಿಕೊಂಡು ಸ್ಥಳೀಯ ಆರೋಗ್ಯ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸುವ ಹಾಗೂ ಆರೋಗ್ಯ ಸೇವೆಗಳ ಜಾಗೃತಿ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ