ಶುಕ್ರವಾರ, ಸೆಪ್ಟೆಂಬರ್ 1, 2023

ಯುವಕ ನಾಪತ್ತೆ; ಪತ್ತೆಗೆ ಮನವಿ

ಬಳ್ಳಾರಿ,ಸೆ.01(ಕರ್ನಾಟಕ ವಾರ್ತೆ): ಸಂಡೂರು ತಾಲೂಕಿನ ಕುರೆಕುಪ್ಪ ಗ್ರಾಮದ 1ನೇ ವಾರ್ಡ್‍ನ ನಿವಾಸಿ ಶ್ಯಾಮಿಲ್ ಎನ್ನುವ 23 ವರ್ಷದ ಯುವಕ ಮಾ.23ರಂದು ಕಾಣೆಯಾಗಿದ್ದು, ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು. ಚಹರೆ: ತೆಳುವಾದ ಮೈಕಟ್ಟು, ಕೋಲುಮುಖ, ಗೋಧಿ ಮೈಬಣ್ಣ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.08395-250100, ಮೊ.9480803062 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ