ಶನಿವಾರ, ಸೆಪ್ಟೆಂಬರ್ 30, 2023

ಅಂತರಾಷ್ಟ್ರೀಯ ಸುರಕ್ಷಿತ ಗರ್ಭಪಾತ ದಿನ

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಗರ್ಭಿಣಿ ಅವಧಿಯಲ್ಲಿ ಮಗುವಿನ ಬೆಳವಣಿಗೆಯಲ್ಲಿ ನ್ಯೂನತೆಗಳು ಅಥವಾ ತಾಯಿಯ ಜೀವಕ್ಕೆ ಗಂಡಾಂತರ ಸನ್ನಿವೇಶಗಳು ಕಂಡುಬಂದಾಗ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗಳಲ್ಲಿಯೇ ನುರಿತ ತರಬೇತಿ ಹೊಂದಿದ ವೈದ್ಯರಿಂದ ಗರ್ಭಪಾತ ಮಾಡಿಸುವುದರಿಂದ ಯಾವುದೇ ಸೋಂಕು ಉಂಟಾಗದಂತೆ ತಾಯಿ ಆರೋಗ್ಯವನ್ನು ಕಾಪಾಡಲು ಸಹಾಯಕವಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನ ವಿಭಾಗ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಡಿಹಟ್ಟಿ ಹಾಗೂ ಐಪಾಸ ಸಂಸ್ಥೆಯ ಸಹಯೋಗದಲ್ಲಿ ಬಂಡಿಹಟ್ಟಿ ನಗರ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಸುರಕ್ಷಿತ ಗರ್ಭಪಾತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರದಲ್ಲಿ ಅಸುರಕ್ಷಿತ ಗರ್ಭಪಾತಗಳಿಂದ ಶೇ.8 ಮಹಿಳೆಯರ ಮರಣ ಸಂಭವಿಸುತ್ತದೆ, ಅದನ್ನು ತಡೆಗಟ್ಟಲು ಐಪಾಸ ಸಂಸ್ಥೆಯ ಸಹಯೋಗದಲ್ಲಿ ಕರ್ನಾಟಕ ಸರಕಾರ 2014 ರಿಂದ ಸುರಕ್ಷಿತ ಗರ್ಭಪಾತ ಕಾರ್ಯಕ್ರಮವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲೆಯಲ್ಲಿ ವೈದ್ಯಾಧಿಕಾರಿಗಳಿಗೆ ಸುರಕ್ಷಿತ ವಿಧಾನಗಳ ಮೂಲಕ ಗರ್ಭಪಾತ ಮಾಡುವ ಬಗ್ಗೆ ಹಾಗೂ ಗರ್ಭಪಾತದ ನಂತರದ ಗರ್ಭನಿರೋಧಕಗಳ ಮಹತ್ವವನ್ನು ತಿಳಿಸಲು ನಿರಂತರ ತರಬೇತಿ ನೀಡಿ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತಿದ್ದು, ಇವರಿಗೆ ಕಾಯ್ದೆಯನುಸಾರ ಗರ್ಭಪಾತ ಸೇವೆಯನ್ನು ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, “ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಕಾಯ್ದೆ 2021ರ ಮೂಲಕ ಮಹಿಳಾ ಸಬಲೀಕರಣ” ಎಂಬುದು ಈ ವರ್ಷದ ಘೋಷವಾಕ್ಯವಾಗಿದ್ದು, ಗರ್ಭವತಿಯಾದ ಪ್ರತಿ ಮಹಿಳೆಯು ತಮ್ಮ ಆರೋಗ್ಯವನ್ನು ನಿರಂತರವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಮಹಿಳೆಯರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಹಾಗೂ ಸುರಕ್ಷಿತವಾಗಿ ಸಿಗುತ್ತಿರುವುದರಿಂದ ಅಸುರಕ್ಷಿತ ಗರ್ಭಪಾತದಿಂದ ಆಗುತ್ತಿದ್ದ ತಾಯಿಯ ಮರಣ ಪ್ರಮಾಣ ಕಡಿಮೆಯಾಗಲು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುμÁ್ಟನಗೊಳಿಸಲು 2021 ರ ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಕಾಯ್ದೆ ಸಹಕಾರಿಯಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ತಾಲ್ಲೂಕ ಆರೋಗ್ಯ ಅಧಿಕಾರಿ ಡಾ.ಮೋಹನಕುಮಾರಿ, ಡಾ.ಸೈಯಿದಾ ಯಾಸ್ಮೀನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಐಪಸಾ ಸಂಸ್ಥೆಯ ದೊಡ್ಡನಗೌಡ, ಎಎಸ್‍ಒ ರಾಘವೇಂದ್ರ, ಡಿಎನ್‍ಒ ಗಿರೀಶ್ ಸೇರಿದಂತೆ ಸಿಬ್ಬಂದಿಯವರು ಹಾಗೂ ಇತರರು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ