ಶನಿವಾರ, ಸೆಪ್ಟೆಂಬರ್ 16, 2023

ಅಲ್ಪಸಂಖ್ಯಾತರ ಸಮುದಾಯದವರಿಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ

ಬಳ್ಳಾರಿ,ಸೆ.16(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಕರ್ನಾಟಕ ಹಜ್ ಭವನ ಇಲ್ಲಿ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಅರ್ಜಿಗಳನ್ನು ಸೇವಾಸಿಂದು ವೆಬ್ ಪೋರ್ಟಲ್ https;//sevasindu.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿರುತ್ತದೆ. ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ www.dom.kernataka.gov.in ರಲ್ಲಿ “2023-24 ಸಾಲಿನ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ” ಇಲ್ಲಿ ಕ್ಲಿಕ್ ಮಾಡುವುದರ ಮೂಲಕ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ