ಶುಕ್ರವಾರ, ಸೆಪ್ಟೆಂಬರ್ 1, 2023
ಕ್ಷಯರೋಗಿಗಳಿಗೆ ಉಚಿತ ರೇಷನ್ ಕಿಟ್ ವಿತರಣೆ
ಬಳ್ಳಾರಿ,ಸೆ.01(ಕರ್ನಾಟಕ ವಾರ್ತೆ):
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಅಧ್ಯಕ್ಷರು ಆಗಿರುವ ರಾಜ್ಯದ ರಾಜ್ಯಪಾಲರು ಇವರ ಕಚೇರಿಯಿಂದ ನಿ-ಕ್ಷಯ ಮಿತ್ರಯೋಜನೆ ಅಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ 10 ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ಪೌಷ್ಟಿಕ ಆಹಾರಧಾನ್ಯ(ರೇಷನ್ ಕಿಟ್) ಉಚಿತವಾಗಿ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಹಯೋಗದೊಂದಿಗೆ ಜಿಲ್ಲೆಯ 10 ಕ್ಷಯ ರೋಗಿಗಳಿಗೆ ಆಗಸ್ಟ್ ತಿಂಗಳ ಮಾಸಿಕ ರೇಷನ್ ಕಿಟ್‍ಗಳನ್ನು ಗುರುವಾರ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದಲ್ಲಿ ವಿತರಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಉಪಸಭಾಪತಿ ಡಾ.ಎಸ್.ಜೆ.ವಿ.ಹಮಿಪಾಲ್, ಕಾರ್ಯದರ್ಶಿ ಎಂ.ಎ.ಷಕೀಬ್ ಹಾಗೂ ಇತರರು ಉಪಸ್ಥಿತರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ