ಶುಕ್ರವಾರ, ಸೆಪ್ಟೆಂಬರ್ 22, 2023

ನಾಗಪುರದ ದೀಕ್ಷಾ ಭೂಮಿಗೆ ಭೇಟಿ ನೀಡಲು ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ,ಸೆ.22(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ನಾಗಪುರದ ದೀಕ್ಷಾ ಭೂಮಿಗೆ ಭೇಟಿ ನೀಡಲು ಅರ್ಹ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ. ಆಸಕ್ತರು ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-267932ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ