ಶುಕ್ರವಾರ, ಸೆಪ್ಟೆಂಬರ್ 29, 2023

ಬಳ್ಳಾರಿ ಮಹಾನಗರ ಪಾಲಿಕೆಯಿಂದ ಸ್ವಚ್ಚತಾ “ಶ್ರಮದಾನ” ಕಾರ್ಯಕ್ರಮ ಸಾರ್ವಜನಿಕರಿಗೆ ಸ್ವಚ್ಛತಾ ಅರಿವು ಅಗತ್ಯ: ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್

ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ): ಸಾರ್ವಜನಿಕರು ಕಸವನ್ನು ನಿಗದಿಪಡಿಸಿದ ಸ್ಥಳದಲ್ಲಿಯೇ ಹಾಕಬೇಕು. ಹಸಿಕಸ, ಒಣಕಸ ವಿಂಗಡಣೆ ಮಾಡಿ ಪಾಲಿಕೆಯ ತ್ಯಾಜ್ಯ ವಸ್ತು ವಿಲೇವಾರಿ ವಾಹನಗಳಿಗೆ ನೀಡಬೇಕು. ಪ್ಲಾಸ್ಟಿಕ್ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಕೆ ಅರಿವು ಅಗತ್ಯವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್ ಅವರು ಹೇಳಿದರು. ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿಯ ಸ್ಮರಣಾರ್ಥವಾಗಿ ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ನಿರ್ದೇಶನದಂತೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಚತೆಯೇ ಸೇವೆಯಡಿ ಶುಕ್ರವಾರದಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಾಂಸ್ಕøತಿಕ ಸಮುಚ್ಚಯ ಆವರಣದಲ್ಲಿ ಸ್ವಚ್ಚತೆಯ “ಶ್ರಮದಾನ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ನೈರ್ಮಲ್ಯ ಕುರಿತಾಗಿ ನಗರದಲ್ಲಿ ಮೂರು ದಿನಗಳ ಸ್ವಚ್ಛತಾ “ಶ್ರಮದಾನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಭಾಗಿಯಾಗುವಂತೆ ಮನವಿ ಮಾಡಿದರು. “ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಆವರಣದಲ್ಲಿ ದಿನನಿತ್ಯವೂ ಮುಂಜಾನೆ ಮತ್ತು ಸಂಜೆ ಹೊತ್ತಿನಲ್ಲಿ ಸುಮಾರು ನೂರಕ್ಕೂ ಅಧಿಕ ಸಾರ್ವಜನಿಕರು, ಹಿರಿಯ ನಾಗರಿಕರು ವಾಕಿಂಗ್‍ಗೆ ಬರುತ್ತಾರೆ ಹಾಗೂ ವಿದ್ಯಾರ್ಥಿಗಳು ಅಭ್ಯಸಿಸಲು ಕ್ರೇಂದ್ರ ಗ್ರಂಥಾಲಯಕ್ಕೆ ಬರುತ್ತಾರೆ. ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಇಂತಹ ಸ್ವಚ್ಛತಾ ಕಾರ್ಯಕಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಸ್ವಚ್ಛತಾ ‘ಶ್ರಮದಾನ’ದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಚ್ಛತಾ “ಶ್ರಮದಾನ” ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಬಿ.ಜಾನಕಿ, ಮಹಾನಗರ ಪಾಲಿಕೆಯ 21ನೇ ವಾರ್ಡಿನ ಸದಸ್ಯ ಅಶೋಕ ಕುಮಾರ್, ಮಿನೇರಾ ಸ್ಟೀಲ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್‍ನ ನಿರ್ದೇಶಕ ಟಿ.ಹನುಮಂತರೆಡ್ಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾಜಿರಾವ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕಿ ಲಕ್ಷ್ಮೀ ಕಿರಣ್, ಮುಖಂಡರಾದ ವೆಂಕಟರೆಡ್ಡಿ, ಶಂಕರ್, ಕಿರಣ, ಶಶಿಧರ ಹಾಗೂ ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ