ಶನಿವಾರ, ಸೆಪ್ಟೆಂಬರ್ 16, 2023

ಮೀನುಗಾರಿಕೆ ಇಲಾಖೆ: ಜಿಲ್ಲಾ ವಲಯ ಯೋಜನೆಗಳಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಸೆ.16(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿಗೆ ಜಿಲ್ಲಾ ಪಂಚಾಯತ್‍ನ ಮೀನುಗಾರಿಕೆ ಇಲಾಖೆಯಿಂದ ಜಿಲ್ಲಾ ವಲಯ ಯೋಜನೆಗಳಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. *ಯೋಜನೆಗಳು:* ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ ಮೀನು ಕೃಷಿ ಕೊಳ ನಿರ್ಮಾಣ ಮಾಡಲು ರೂ.4.40 ಲಕ್ಷ (ಒಂದು ಹೆಕ್ಟೆರ್ೀ ಕೊಳಕ್ಕೆ) ಸಹಾಯಧನ ನೀಡಲಾಗುವುದು. ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ ರೂ.10 ಸಾವಿರ ವೆಚ್ಚದಲ್ಲಿ ಉಚಿತ ಫೈಬರ್ ಗ್ಲಾಸ್ ಹರಿಗೋಲುಗಳನ್ನು ವಿತರಿಸಲಾಗುವುದು. ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ ರೂ.10 ಸಾವಿರ ವೆಚ್ಚದಲ್ಲಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ಟುಗಳನ್ನು ವಿತರಿಸಲಾಗುವುದು. ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸ್ಯವಾಹಿನಿ ಯೋಜನೆಯಡಿ ಐಸ್ ಬಾಕ್ಸ್‍ನೊಂದಿಗೆ ಮೊಪೆಡ್ ಮತ್ತು ಸೈಕಲ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ. ಅರ್ಹರು ಅಗತ್ಯ ದಾಖಲೆಗಳೊಡನೆ ವೆಬ್‍ಸೈಟ್ ವಿಳಾಸ https://ballari.nic.in/ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ಅಥವಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಯ ಮುಖಾಂತರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆ.30 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಮತ್ತು ಜಿಲ್ಲಾ ಪಂಚಾಯತ್‍ನ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ