ಮಂಗಳವಾರ, ಸೆಪ್ಟೆಂಬರ್ 26, 2023

ಜನತಾ ದರ್ಶನದಲ್ಲಿ ಆಭಾ ಆರೋಗ್ಯ ಕಾರ್ಡ್ ವಿತರಿಸಿದ ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ): ನಗರದ ನೂತನ ಜಿಲ್ಲಾಡಳಿತ ಭವನದ ಅವರಣದಲ್ಲಿ ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಆರೋಗ್ಯ ಇಲಾಖೆಯ ಆಯುಷ್ಮಾನ್ ಭಾರತ-ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ-ಆರೋಗ್ಯ ಕಾರ್ಡ್‍ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಬಳಿಕÀ ಮಾತನಾಡಿದ ಅವರು, ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷಗಳ ವರೆಗೆ, ಎಪಿಎಲ್ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯನ್ನು ಸುಸಜ್ಜಿತ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಸೌಲಭ್ಯ ಪಡೆಯುವಂತೆ ಎಲ್ಲ ಸಾರ್ವಜನಿಕರಿಗೆ ತಿಳಿಸಿದರು. ಸರಿ ಸುಮಾರು 1650 ಶಸ್ತ್ರಚಿಕಿತ್ಸಾ ವಿಧಾನಗಳನ್ನು ಈ ಸೌಲಭ್ಯದಡಿ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆಯಿರಿ ಎಂದ ಅವರು, ಆಯುಷ್ಮಾನ್ ಭವಃ ಆರೋಗ್ಯ ಅಭಿಯಾನದ ಅಡಿ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರದಳಲ್ಲಿ ಪ್ರತಿ ಮಂಗಳವಾರ ಉಚಿತ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ಜನತೆ ಸದುಪಯೋಗ ಪಡೆಯುವ ಜತೆಗೆ ಸಕ್ಕರೆ ಖಾಯಿಲೆ, ರಕ್ತದೊತ್ತಡ, ಕ್ಷಯರೋಗ ಪರೀಕ್ಷೆ, ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರಗಳಲ್ಲಿ ಭಾಗಿಯಾಗಲು ವಿನಂತಿಸಿದರು. ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಕಾರ್ಡ್ ಸೃಜನೆ ಮಾಡಿಸುವ ಮೂಲಕ ಸಚಿವರು, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಬಿ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ .ಕೆ.ವಿ ತ್ರಿಲೋಕಚಂದ್ರ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್ ಬಸರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ