ಮಂಗಳವಾರ, ಸೆಪ್ಟೆಂಬರ್ 19, 2023
ತೋಟಗಾರಿಕೆ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ):
ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಹಾಗೂ ಬೈಯೋಡೈಜಿಸ್ಟರ್ ಮತ್ತು ಅರಣ್ಯಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಈ ಯೋಜನೆಗಳ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಯೋಜನೆಯ ಕಾರ್ಯಕ್ರಮಗಳ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ