ಭಾನುವಾರ, ಸೆಪ್ಟೆಂಬರ್ 24, 2023

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ “ಸಾಂಸ್ಕøತಿಕ ಯುವಜನೋತ್ಸವಕ್ಕೆ ತೆರೆ” ವಿದ್ಯಾರ್ಥಿಗಳಿಗೆ ಸಾಧಕರ ಸಾಧನೆಯ ಸ್ಮರಣೆ ಅಗತ್ಯ: ಎಸ್.ಎನ್.ರುದ್ರೇಶ್

ಬಳ್ಳಾರಿ,ಸೆ.24(ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ಸಾಧಕರ ಸಾಧನೆಯನ್ನು ಸ್ಮರಿಕೊಳ್ಳುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್.ರುದ್ರೇಶ ಹೇಳಿದರು. ಅವರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಅಂತರ್ ವಿಭಾಗೀಯ ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ 2023’ರ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಂಸ್ಕøತಿಕ ಚಟುವಟಿಕೆಗಳು ಒತ್ತಡಗಳನ್ನು ನಿರ್ವಹಿಸಲು ನೆಮ್ಮದಿ ನೀಡುತ್ತವೆ. ಕಲೆಯನ್ನು ಕರಗತವಾಗುವಂತೆ ತಮ್ಮನ್ನು ತಾವು ಅರ್ಪಿಸಿಕೊಳ್ಳುವ ಮೂಲಕ ಜೀವನವನ್ನು ಬಲಪಡಿಸಿಕೊಳ್ಳಬಹುದು ಎಂದು ಹೇಳಿದರು. ವಿದ್ಯಾರ್ಥಿಗಳು ತುಲನಾತ್ಮಕ ಅಧ್ಯಯನದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿಸಿಕೊಳ್ಳಬಹುದು. ವಿದ್ರ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೌಶಲ್ಯ ಅಭಿವೃದ್ಧಿ, ಕ್ಯಾಂಪಸ್ ಸೆಲೆಕ್ಷನ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಗತಿಗಳನ್ನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗುವುದು. ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಅಭೌತಪೂರ್ವಕವಾದ ಬೌದ್ಧಿಕ ಆಲೋಚನೆಗಳು ಮುಖ್ಯವಾಗಿವೆ ಎಂದರು. ಸಾಂಸ್ಕøತಿಕ ಸಂಚಾಲಕ ಪ್ರೊ.ಶಾಂತನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಎರಡು ದಿನಗಳ ಅಂತರ್ ವಿಭಾಗೀಯ ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ 2023’ರ ಕುರಿತು ಮಾಹಿತಿ ನೀಡಿದರು. ಅಂತರ್ ವಿಭಾಗೀಯ ಸಾಂಸ್ಕøತಿಕ ವಿವಿಧ ಸ್ಪರ್ಧೆಗಳಲ್ಲಿ ಯುವ ವಿದ್ಯಾರ್ಥಿಗಳ ಪ್ರತಿಭಾ ಸಾಮಥ್ರ್ಯವನ್ನು ಪ್ರದರ್ಶಿಸಿದನ್ನು ಸ್ಮರಿಸಿದರು. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (ಮುಖ್ಯ ಆವರಣ) ಪ್ರದರ್ಶನ ಕಲೆ ನಾಟಕ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಬಹುಮಾನ, ಇಂಗ್ಲೀಷ್ ಅಧ್ಯಯನ ವಿಭಾಗವು ಎರಡನೇ ಸ್ಥಾನ, ಪಿ.ಜಿ.ಸೆಂಟರ್ ಯಲಬುರ್ಗಾ ಮೂರನೇ ಸ್ಥಾನ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕøತಿ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಪದಕಗಳನ್ನು ವಿತರಿಸಲಾಯಿತು. ಅಂತರ್ ವಿಭಾಗೀಯ ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ ಕುರಿತು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ನಾತಕೋತ್ತರ ಕೇಂದ್ರಗಳ ನಿರ್ದೇಶಕರು, ವಿವಿಧ ನಿಕಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ