ಶುಕ್ರವಾರ, ಸೆಪ್ಟೆಂಬರ್ 15, 2023

ತಾಯಿ, ಮಗಳು ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಸೆ.15(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲೂಕಿನ ಹಳೇಕೋಟೆ ಗ್ರಾಮದ ನಿವಾಸಿಯಾದ ಮಲ್ಲಮ್ಮ ಎನ್ನುವ 27 ವರ್ಷದ ತಾಯಿ ಹಾಗೂ ಕಾವ್ಯ ಎನ್ನುವ 07 ವರ್ಷದ ಮಗಳು ಸೆ.05ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಯಿ ಮಲ್ಲಮ್ಮ ಚಹರೆ ಗುರುತು: ಎತ್ತರ 5.2 ಅಡಿ, ಸಾಧಾರಣ ಮೈಕಟ್ಟು, ಕೆಂಪು ಮೈಬಣ್ಣ, ಕೋಲುಮುಖ ಹೋಂದಿದ್ದು, ಎಡಗೈ ಮೇಲೆ ಕಾವ್ಯ ಎಂಬ ಹಚ್ಚೆ ಗುರುತು ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಸೀರೆ, ನೀಲಿ ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಮಗಳು ಕಾವ್ಯ ಚಹರೆ ಗುರುತು: ಎತ್ತರ 3.1 ಅಡಿ, ಸಾಧಾರಣ ಮೈಕಟ್ಟು, ಕೆಂಪು ಮೈಬಣ್ಣ, ಕೋಲುಮುಖ ಹೊಂದಿದ್ದು, ಹಣೆಯ ಮಧ್ಯಭಾಗದಲ್ಲಿ ಹಚ್ಚೆ ಗುರುತು ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಫ್ರಾಕ್ ಧರಿಸಿರುತ್ತಾಳೆ. ಕಾಣೆಯಾಗಿರುವ ಇಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪೆÇಲೀಸ್ ಠಾಣೆಯ ಪಿ.ಎಸ್.ಐ ದೂ.08396-220333, ಸಿರುಗುಪ್ಪ ವೃತ ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿ.ಎಸ್.ಪಿ ದೂ.08392-276000 ಹಾಗೂ ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08932-258400 ಗೆ ಸಂಪರ್ಕಿಬಹುದು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ