ಮಂಗಳವಾರ, ಸೆಪ್ಟೆಂಬರ್ 19, 2023

ಉಚಿತ ಒಂದು ದಿನದ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ; ನೊಂದಣಿ ಆಹ್ವಾನ

ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಛಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗುತ್ತಿದ್ದು, ಆಸಕ್ತ ಯುವಕ ಮತ್ತು ಯುವತಿಯರು ನೊಂದಾಯಿಸಿಕೊಳ್ಳಬಹುದು ಎಂದು ಸಿಡಾಕ್‍ನ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಸೆ.21ರಂದು ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ, ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ. ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಮೂಲಕ ತರಬೇತಿ ಕಾರ್ಯಕ್ರಮಕ್ಕೆ ನೊಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳು 18 ವರ್ಷದಿಂದ 45 ವರ್ಷ ವಯಸ್ಸಿನವರಾಗಿರಬೇಕು. ಓದಲು, ಬರೆಯಲು ಬರುತ್ತಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ನಗರದ ಹೊಸಪೇಟೆ ರಸ್ತೆಯ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.7483538942, 9449226221 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ