ಶನಿವಾರ, ಸೆಪ್ಟೆಂಬರ್ 2, 2023
ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಣೆ: ಅರ್ಜಿ ಆಹ್ವಾನ
ಬಳ್ಳಾರಿ,ಸೆ.02(ಕರ್ನಾಟಕ ವಾರ್ತೆ):
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ ಮಾಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ, ಪಿಯುಸಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುವುದು ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ (ಮೆರಿಟ್ ಆಧಾರದ ಮೇಲೆ) ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದು. ಸಮನಾದ ಅಂಕಗಳನ್ನು ಪಡೆದಾಗ ಫಲಾನುಭವಿಯು ನೊಂದಣಿ ಸದಸ್ಯತ್ವದ ಹಿರಿತನವನ್ನು ಆಯ್ಕೆಗೆ ಪರಿಗಣಿಸಲಾಗುವುದು. ಫಲಾನುಭವಿಯ ಒಂದು ಮಕ್ಕಳಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಪತಿ ಮತ್ತು ಪತ್ನಿ ಇಬ್ಬರು ನೊಂದಾಯಿತ ಕಾರ್ಮಿಕರಾಗಿದ್ದಲ್ಲಿಯೂ ಸಹ ಒಂದು ಮಕ್ಕಳಿಗೆ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು.
ಕರ್ನಾಟಕ ರಾಜ್ಯದ ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಮಾತ್ರ ಅನ್ವಯಿಸಲಿದೆ.
ಮುಕ್ತ ವಿಶ್ವವಿದ್ಯಾನಿಲಯ/ದೂರ ಶಿಕ್ಷಣ ಮೂಲಕ (ಅoಡಿಡಿesಠಿoಟಿಜeಟಿಛಿe ಅouಡಿse) ವ್ಯಾಸಂಗ ಮಾಡುತ್ತಿರುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಭವನ, ಮೊಹಮ್ಮದೀಯ ಕಾಲೇಜ್ ಹಿಂಭಾಗ 1ನೇ ಗೇಟ್ ಕೌಲ್‍ಬಜಾರ್, ನಲ್ಲಚೇರುವು, ಕಾರ್ಮಿಕ ಅಧಿಕಾರಿ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ