ಶನಿವಾರ, ಸೆಪ್ಟೆಂಬರ್ 16, 2023
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.16(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲೂಕಿನ ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರಿಗೆ ಕೃಷಿ ಇಲಾಖೆಯ ಆತ್ಮ ಯೋಜನೆಯಡಿಯಲ್ಲಿ ‘ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಯು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಯಾಗಿದ್ದು, ಆಸಕ್ತ ಪ್ರಗತಿಪರ ರೈತರು, ರೈತ ಮಹಿಳೆಯರು ಅರ್ಜಿಯನ್ನು ಹೋಬಳಿಯ ರೈತ ಸಂಪರ್ಕ ಕೇಂದ್ರದಿಂದ ಆಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿಮಾಡಿ ಅಕ್ಟೋಬರ್ 16ರೊಳಗಾಗಿ ಇದೇ ಕಚೇರಿಗಳಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ