ಸೋಮವಾರ, ಸೆಪ್ಟೆಂಬರ್ 25, 2023
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪೆÇೀಷಣ್ ಮಾಸಾಚಾರಣೆ ಕಾರ್ಯಕ್ರಮ ಸೆ.26ರಂದ
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆ.26ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಪಂಚಾಯತ್ ಆವರಣ ನಜೀರ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪೆÇೀಷಣ್ ಮಾಸಾಚಾರಣೆ ಕಾರ್ಯಕ್ರಮ ಏರ್ಪಡಿಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸ್.ಹೆಚ್. ಪುಷ್ಪಾಂಜಲಿ ದೇವಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಸೇರಿದಂತೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶಬಾಬು, ಆರ್.ಸಿ.ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎ.ಹನುಮಕ್ಕ ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಜಾತ್ ಪಾಟೀಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಸಂತೋಷ್ ಸಪ್ಪಂಡಿ, ಕೃಷಿ ಇಲಾಖೆ ಉಪನಿರ್ದೇಶಕರು ಕೆಂಗೇಗೌಡ, ಆಹಾರ ಮತ್ತು ನಾಗರೀಕ ಸರಬಹರಾಜು ಇಲಾಖೆ ಜಂಟಿ ನಿರ್ದೇಶಕರು ಎಂ.ಸುನೀತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಸತೀಶ್ ಕೆ.ಹೆಚ್, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು ಜಡಿಯಪ್ಪ.ಜಿ ಅವರು ಸೇರಿದಂತೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸ್ವಾಗತ ಬಯಸುವವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಕೆ.ಹೆಚ್ ವಿಜಯಕುಮಾರ್
ಜಿಲ್ಲಾ ನಿರೂಪಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳಾ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬಳ್ಳಾರಿ ನಗರ ಮತ್ತು ಗ್ರಾಮಾಂತರ ಹಾಗೂ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರ ಆಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ