ಮಂಗಳವಾರ, ಸೆಪ್ಟೆಂಬರ್ 26, 2023

ಜಿಲ್ಲಾ ಹಾಗೂ ತಾಲೂಕು ಮಟ್ಟದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಗರ್ಭೀಣಿ, ಬಾಣಂತಿಯರು ಪೌಷ್ಠಿಕ ಆಹಾರ ಸೇವಿಸಿ: ನ್ಯಾ.ರಾಜೇಶ್.ಎನ್.ಹೊಸಮನೆ

ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ): ಗರ್ಭೀಣಿ, ಬಾಣಂತಿಯರು ಹೆಚ್ಚಾಗಿ ತರಕಾರಿ-ಸೊಪ್ಪು ಹಾಗೂ ಪೌಷ್ಠಿಕ ಭರಿತ ಆಹಾರವನ್ನೇ ಸೇವಿಸಬೇಕು. ಇದರಿಂದ ಹುಟ್ಟುವ ಮಕ್ಕಳು ಆರೋಗ್ಯ ಮತ್ತು ಪೌಷ್ಠಿಕತೆಯಿಂದ ಕೂಡಿ ಸದೃಢರಾಗುತ್ತಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಆವರಣದ ನಜೀರ್ ಸಭಾಂಗಣದಲ್ಲಿ ಮಂಗಳವಾರದಂದು ಹಮ್ಮಿಕೊಂಡಿದ್ದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆಶಾಕಾರ್ಯಕರ್ತೆಯರು ಗ್ರಾಮೀಣ ಮಟ್ಟದಲ್ಲಿ ಗರ್ಭೀಣಿ, ಬಾಣಂತಿಯರಿಗೆ ಪೌಷ್ಠಿಕ ಆಹಾರ ಕುರಿತು ಜಾಗೃತಿ ನೀಡಬೇಕು. ಗ್ರಾಮೀಣ ಭಾಗದಲ್ಲಿನ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಸರಿಯಾಗಿ ನಿಡದೆ ಸಂದರ್ಭದಲ್ಲಿ ಎಂತಹ ಆಹಾರವನ್ನು ಸೇವಿಸಬೇಕು ಎನ್ನುವುದರ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಾರಕ್ಕೊಮ್ಮೆ ಅಥವಾ 15ದಿನಗಳಿಗೊಮ್ಮೆ ಭೇಟಿ ನೀಡಿ ಪೌಷ್ಠಿಕ ಆಹಾರ ಸೇವನೆಯ ಕುರಿತು ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿದೇರ್ಶಕರಾದ ಕೆ.ಹೆಚ್.ವಿಜಯಕುಮಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ 1ನೇ ಶುಕ್ರವಾರ ಮತ್ತು 3ನೇ ಶುಕ್ರವಾರದಂದು ನಡೆಯುವ ಸಮುದಾಯ ಆಧಾರಿತ ಚಟುವಟಿಕೆಗಳಾದ ಸೀಮಂತ ಕಾರ್ಯಕ್ರಮ, ಅನ್ನಪ್ರಾಶನ್ನ, ಸುಪೆÇೀಷಣ್ ಕಾರ್ಯಕ್ರಮ, ಅರ್ಹ ವಯೋಮಾನದವರು ಶಾಲಾಪೂರ್ವ ಶಿಕ್ಷಣಕ್ಕೆ ಅಂಗನವಾಡಿಗೆ ದಾಖಲಿಸುವುದು, ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ಕಡಿಮೆಗೊಳಿಸುವಿಕೆ ಮತ್ತು ಪೌಷ್ಠಿಕತೆಯನ್ನು ಉತ್ತಮಗೊಳಿಸುವಿಕೆ ಕಾರ್ಯಕ್ರಮಗಳ ಮೂಲಕ ಫಲಾನುಭವಿಗಳಿಗೆ ಜಾಗೃತಿ ಮತ್ತು ಅರಿವು ಮೂಡಿಸುವದರ ಮೂಲಕ ಪೌಷ್ಠಿಕತೆಯನ್ನು ಉತ್ತಮಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು. ಕಾರ್ಯಕ್ರಮದಲ್ಲಿ 7 ಜನ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮತ್ತು 6 ತಿಂಗಳೊಳಗಿನ ಮಕ್ಕಳಿಗೆ ಅನ್ನಪ್ರಾಶನ ಮಾಡಲಾಯಿತು. ಜಿಲ್ಲಾ ಪಂಚಾಯತ್‍ನ ಆವರಣದಲ್ಲಿ ಹಾಕಲಾಗಿದ್ದ ಪೌಷ್ಠಿಕ ಆಹಾರ ಪ್ರದರ್ಶನ ಮಳಿಗೆಯು ನೋಡುಗರನ್ನು ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅನೀಲ್‍ಕುಮಾರ್, ಆಯುಷ್ ಅಧಿಕಾರಿ ವಿಜಯೇಂದ್ರ, ಸಿಡಿಪಿಒ ನಾಗರಾಜ, ಮೋಹನ ಕುಮಾರಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮಹಿಳೆಯರು ಮತ್ತು ಇನ್ನೀತರರು ಉಪಸ್ಥಿತರಿದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ