ಮಂಗಳವಾರ, ಅಕ್ಟೋಬರ್ 3, 2023
ಅ.05ರಂದು ತುರ್ತು ನೀರಾವರಿ ಸಲಹಾ ಸಮಿತಿ ಸಭೆ
ಬಳ್ಳಾರಿ,ಅ.03(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿಗೆ ತುಂಗಾಭದ್ರ ಜಲಾಶಯದಲ್ಲಿ ಪ್ರಸ್ತುತ ಒಳಹರಿವನ್ನು ಪರಿಗಣಿಸಿ ಬೆಳೆಗಳನ್ನು ಸಂರಕ್ಷಿಸಲು ಪರಿಷ್ಕøತ ಪ್ರಮಾಣ ಮತ್ತು ವೇಳಾಪಟ್ಟಿಯನ್ನು ನಿರ್ಧರಿಸಲು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಅ.05ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ವಿಕಾಸಸೌಧದಲ್ಲಿ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ